×
Ad

ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2026-02-28 19:56 IST

ಬೆಂಗಳೂರು, ಫೆ.27: ಶಿಶು ಅಭಿವೃದ್ಧ ಯೋಜನೆ, ಬೆಂಗಳೂರು ದಕ್ಷಿಣ ತಾಲೂಕು, ಬೆಂ.ನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳ ಗೌರವಧನ ಆಧಾರದಲ್ಲಿ ಕಾರ್ಯನಿರ್ವಹಿಸಲು ಅಂಗನವಾಡಿ ಸಹಾಯಕಿಯರ 101 ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬೆಂಗಳೂರು ದಕ್ಷಿಣ ತಾಲೂಕು, ಬೆಂ.ನಗರ ಜಿಲ್ಲೆ, ಟಿಎಪಿಸಿಎಂಎಸ್ ಕಟ್ಟಡ, ಮೊದಲನೇ ಮಹಡಿ, ಬನಶಂಕರಿ, ಬೆಂಗಳೂರು-70 ಇಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದುಕೊಂಡು, ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಮಾ.25ರ ಸಂಜೆ 5:30ರೊಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080- 2671 3097ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News