ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?
Photo Credit : bmrc.co.in
ಆನ್ಲೈನ್ ನಲ್ಲಿ ಫಾರ್ಮ್ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಒಂದು ಲಕೋಟೆಯಲ್ಲಿ ಹಾಕಿ ವಿಳಾಸಕ್ಕೆ ರಿಜಿಸ್ಟರ್ಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸಿ.
ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಪ್ರಸ್ತುತ ಡೆಪ್ಯುಟಿ ಜನರಲ್ ಮ್ಯಾನೇಜರ್ (ಆಪರೇಷನ್ ಸೇಫ್ಟಿ) ಮತ್ತು ಸೂಪರ್‌ವೈಸರ್ (ಆಪರೇಷನ್ ಸೇಫ್ಟಿ) ಹುದ್ದೆಗಳಿಗೆ ಗುತ್ತಿಗೆ ಅಥವಾ ನಿಯೋಜನೆ (Deputation) ಆಧಾರದ ಮೇಲೆ ಅರ್ಜಿ ಆಹ್ವಾನಿಸಿದೆ. ಆಸಕ್ತರು 2026 ಆಗಸ್ಟ್ 13 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಬಳಸಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು: https://www.bmrc.co.in/career/
ಭರ್ತಿ ಮಾಡಿದ ಅರ್ಜಿಯನ್ನು ಒಂದು ಲಕೋಟೆಯಲ್ಲಿ ಹಾಕಿ, ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸಿ: ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL), III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027.
ನೇಮಕಾತಿ ಕುರಿತ ಪ್ರಮುಖ ವಿವರಗಳು
* ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್
* ಹುದ್ದೆ: ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಸೂಪರ್‌ವೈಸರ್
* ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ ಮಾತ್ರ
* ಕೊನೆಯ ದಿನಾಂಕ: 2026 ಆಗಸ್ಟ್ 13
ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 2026 ಜುಲೈ 07
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2026 ಜುಲೈ 28
ಶೈಕ್ಷಣಿಕ ಅರ್ಹತೆ:
ಬಿಎಂಆರ್‌ಸಿಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಯಾವುದೇ ಪದವಿ/ ಇಂಜಿನಿಯರಿಂಗ್ ಜೊತೆಗೆ 14 ವರ್ಷಗಳ ವೃತ್ತಿ ಅನುಭವ ಅಗತ್ಯ. ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ವಯೋಮಿತಿ:
* ಅಭ್ಯರ್ಥಿಯ ಗರಿಷ್ಠ ವಯಸ್ಸು 2026 ಜುಲೈ 31 ರಂತೆ 62 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುದು ಹೇಗೆ?
* ಅರ್ಜಿ ನಮೂನೆ ಡೌನ್‌ಲೋಡ್: ಅಧಿಕೃತ ವೆಬ್‌ಸೈಟ್‌ನಿಂದ ಅಧಿಸೂಚನೆಯ PDF ಜೊತೆಗೆ ಇರುವ ‘ಅರ್ಜಿ ನಮೂನೆ’ಯನ್ನು (Application Form) ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
* ಭರ್ತಿ ಮಾಡಿ: ಕೇಳಲಾದ ಎಲ್ಲಾ ಮಾಹಿತಿಯನ್ನು ಸ್ಪಷ್ಟವಾಗಿ ಬರೆಯಿರಿ (Block Letters ಬಳಸುವುದು ಉತ್ತಮ).
* ದಾಖಲೆಗಳ ಲಗತ್ತು: ನಿಮ್ಮ ವಿದ್ಯಾರ್ಹತೆ, ವಯಸ್ಸಿನ ಪ್ರಮಾಣಪತ್ರ ಮತ್ತು ಅನುಭವದ ಪ್ರಮಾಣಪತ್ರಗಳ ದೃಢೀಕೃತ ಪ್ರತಿಗಳನ್ನು (Self-attested photocopies) ಅರ್ಜಿಯೊಂದಿಗೆ ಲಗತ್ತಿಸಿ.
* ಭರ್ತಿ ಮಾಡಿದ ಅರ್ಜಿಯನ್ನು ಒಂದು ಲಕೋಟೆಯಲ್ಲಿ ಹಾಕಿ, ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸಿ: ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL), III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027.