×
Ad

ಬಿ.ಇಡಿ. ದಾಖಲಾತಿ : ಆರನೆಯ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟ

Update: 2026-02-12 21:05 IST

ಸಾಂದರ್ಭಿಕ ಚಿತ್ರ | PC : gemini AI

ಬೆಂಗಳೂರು : ಶಿಕ್ಷಣ ಇಲಾಖೆಯು 2025ನೇ ಸಾಲಿನ ಬಿ.ಇಡಿ. ದಾಖಲಾತಿ ಸಂಬಂಧಿಸಿದಂತೆ ಆರನೆಯ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು https://sts.karnataka.gov.in/GPSTRHK  ವೆಬ್‍ಸೈಟ್‍ನಲ್ಲಿ ಪ್ರಕಟಿಸಿದ್ದು, ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕಾಲೇಜಿಗೆ ಸೇರ್ಪಡೆಗೊಳ್ಳಲು ಸೂಚಿಸಿದೆ.

ಐದನೆಯ ಪಟ್ಟಿಯ ಹಂಚಿಕೆ ಪ್ರಕಾರ ಸೇರ್ಪಡೆಯಾಗಿ ಉಳಿಕೆಯಾಗಿರುವ ಸೀಟುಗಳ ಕಾಲೇಜುವಾರು ಸೀಟ್ ಮ್ಯಾಟ್ರಿಕ್ಸ್ ಅನ್ನು ಫೆ.9ರಂದು https://schooleducation.karnataka.gov.in/  ವೆಬ್‍ಸೈಟ್‍ನಲ್ಲಿ ಪ್ರಕಟಿಸಿದ್ದು, ಕಾಲೇಜುಗಳಿಗೆ ದಾಖಲಾಗದ ಅಭ್ಯರ್ಥಿಗಳು ಆರನೆಯ ಸುತ್ತಿನ ಸೀಟು ಹಂಚಿಕೆಗಾಗಿ ತಮ್ಮ ಅಭಿಮತವನ್ನು ದಾಖಲಿಸಲು ಫೆ.11ರವರೆಗೆ ಅವಕಾಶವನ್ನು ಕಲ್ಪಿಸಲಾಗಿತ್ತು. ಅದರಂತೆ ಈಗ ಆರನೆಯ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು ಪ್ರಕಟಿಸಿದೆ.

ಅಭ್ಯರ್ಥಿಗಳು ಈಗ ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸಿದಲ್ಲಿ ತಮ್ಮ ಯೂಸರ್ ಐಡಿ ಮತ್ತು ಪಾಸ್‍ವರ್ಡನ್ನು ಬಳಸಿ ನಿಗದಿತ ಶುಲ್ಕದ ಚಲನ್ ಅನ್ನು ಮುದ್ರಿಸಿಕೊಂಡು ಭಾರತೀಯ ಸ್ಟೇಟ್ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಪಾವತಿಸಿ ಅದರ ಮೂಲ ಪ್ರತಿ ಹಾಗೂ ಇತರೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಸಂಬಂಧಿಸಿದ ಜಿಲ್ಲಾ ನೋಡಲ್ ಕೇಂದ್ರಕ್ಕೆ ಹಾಜರಾಗಿ ಸಲ್ಲಿಸಿ, ಫೆ.17ರೊಳಗೆ ದಾಖಲಾತಿ ಪತ್ರವನ್ನು ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News