ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

Update: 2026-08-21 22:30 IST

Photo Credit : BEL

2026ರ ಡೆಪ್ಯೂಟಿ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಭಾರತ ಸರಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಪ್ರಮುಖ ಸಾರ್ವಜನಿಕ ವಲಯದ ಉದ್ಯಮವಾಗಿದ್ದು, ವರ್ಷಪೂರ್ತಿ ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಗಳನ್ನು ಪ್ರಕಟಿಸುತ್ತದೆ. ಇದೀಗ ಎರಡು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇಂಜಿನಿಯರಿಂಗ್ ಪದವೀಧರರಿಗೆ ಅವಕಾಶ ನೀಡುತ್ತಿದೆ. 2026ರ ಡೆಪ್ಯೂಟಿ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಮುಂದಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು: https://jobapply.in/bel2026GZBRADARDE/

📌 ಹುದ್ದೆಯ ವಿವರಗಳು

ಸಂಸ್ಥೆಯ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)

ಹುದ್ದೆಯ ಹೆಸರು: ಡೆಪ್ಯೂಟಿ ಇಂಜಿನಿಯರ್ (Deputy Engineer)

ಒಟ್ಟು ಹುದ್ದೆಗಳ ಸಂಖ್ಯೆ: 02

ಮಾಸಿಕ ವೇತನ: 40,000 ರೂ. – 1,40,000 ರೂ.

📌 ಪ್ರಮುಖ ದಿನಾಂಕಗಳು

* ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ: 11 ಆಗಸ್ಟ್ 2026

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 ಸೆಪ್ಟೆಂಬರ್ 2026

📌 ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ BE/B.Tech ಅಥವಾ ತತ್ಸಮಾನ ಪದವಿ ಪೂರ್ಣಗೊಳಿಸಿರಬೇಕು. ಅರ್ಜಿದಾರರ ಗರಿಷ್ಠ ವಯೋಮಿತಿ 28 ವರ್ಷಗಳು.

* ವಯಸ್ಸು: 28 ವರ್ಷಗಳು

* OBC (NCL): 31 ವರ್ಷಗಳು

* PwBD: +10 ವರ್ಷ ಸಡಿಲಿಕೆ

* ಮಾಜಿ ಸೈನಿಕರು: ಸರಕಾರಿ ನಿಯಮಗಳ ಪ್ರಕಾರ

📌 ಅರ್ಜಿ ಶುಲ್ಕ

* ಸಾಮಾನ್ಯ / OBC ಅಭ್ಯರ್ಥಿಗಳಿಗೆ: 472 ರೂ. (400 ರೂ. + 18% GST)

* SC / ST / ESM / PwBD ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.

📌 ಆಯ್ಕೆ ಪ್ರಕ್ರಿಯೆ ಹೇಗೆ?

* ಲಿಖಿತ ಪರೀಕ್ಷೆ

* ನೇರ ಸಂದರ್ಶನ

📌 ಅರ್ಜಿ ಸಲ್ಲಿಸುವ ಹಂತಗಳು

* BEL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹಾಗೂ ‘Careers’ ವಿಭಾಗಕ್ಕೆ ಹೋಗಿ. ಅಧಿಸೂಚನೆಯನ್ನು ಓದಿ.

* ಈ ಮುಂದಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ: https://jobapply.in/bel2026GZBRADARDE/

* ಡೆಪ್ಯೂಟಿ ಇಂಜಿನಿಯರ್ ನೇಮಕಾತಿ ಲಿಂಕ್ ಆಯ್ಕೆ ಮಾಡಿ ನಿಮ್ಮ ವೈಯಕ್ತಿಕ, ಶೈಕ್ಷಣಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.

* ನಿಗದಿತ ಅಳತೆಯಲ್ಲಿ ಛಾಯಾಚಿತ್ರ, ಸಹಿ ಹಾಗೂ ಅಗತ್ಯ ಪ್ರಮಾಣಪತ್ರಗಳನ್ನು ಅಪ್ಲೋಡ್ ಮಾಡಿ.

* ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ, ವಿವರಗಳನ್ನು ಮರುಪರಿಶೀಲಿಸಿ ಫಾರ್ಮ್ ಸಬ್ಮಿಟ್ ಮಾಡಿ.

• ಸಲ್ಲಿಸಿದ ಅರ್ಜಿಯ ಪ್ರಿಂಟ್ಔಟ್ ತೆಗೆದಿಟ್ಟುಕೊಳ್ಳಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News