×
Ad

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

Update: 2026-06-19 18:26 IST

Photo Credit : Central Bank of India

 ರಾಜ್ಯವಾರು ಖಾಲಿ ಹುದ್ದೆಗಳ ವಿವರಗಳು ಅಧಿಸೂಚನೆಯ ಅನುಬಂಧ 1ರಲ್ಲಿವೆ. ಖಾಲಿ ಹುದ್ದೆಗಳ ಸಂಖ್ಯೆಗಳು ತಾತ್ಕಾಲಿಕವಾಗಿದ್ದು, ನಿಜವಾದ ಅಗತ್ಯವನ್ನು ಆಧರಿಸಿ ಬದಲಾಗಬಹುದು.

4,500 ಕ್ಕೂ ಹೆಚ್ಚು ಶಾಖೆಗಳು ಮತ್ತು 34,000+ ಉದ್ಯೋಗಿಗಳನ್ನು ಹೊಂದಿರುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 1961ರ ಅಪ್ರೆಂಟಿಸ್ಗಳ ಕಾಯ್ದೆಯ ಅಡಿಯಲ್ಲಿ ಅಪ್ರೆಂಟಿಸ್ಶಿಪ್ ತೊಡಗಿಸಿಕೊಳ್ಳುವಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ಕಾರ್ಯಕ್ರಮವನ್ನು 2026-27ನೇ ಹಣಕಾಸು ವರ್ಷದ ನ್ಯಾಂಕಿನ ಹ್ಯೂಮನ್ ಕ್ಯಾಪಿಟಲ್ ಮ್ಯಾನೇಜ್ಮೆಂಟ್ (ನೇಮಕಾತಿ & ಬಡ್ತಿ) ಯೋಜನೆಯ ಅನುಸಾರ ಹಮ್ಮಿಕೊಳ್ಳಲಾಗಿದೆ. ಆಯ್ದ ಅಪ್ರೆಂಟಿಸ್ಗಳನ್ನು ಬ್ಯಾಂಕಿನ ವಿವೇಚನೆಗೆ ತಕ್ಕಂತೆ ಭಾರತದಾದ್ಯಂತ ಶಾಖೆಗಳು/ಕಚೇರಿಗಳಲ್ಲಿ ನೇಮಿಸಿಕೊಳ್ಳಲಾಗುತ್ತದೆ.

ರಾಜ್ಯವಾರು ಖಾಲಿ ಹುದ್ದೆಗಳ ವಿವರಗಳು ಅಧಿಸೂಚನೆಯ ಅನುಬಂಧ 1ರಲ್ಲಿವೆ. ಖಾಲಿ ಹುದ್ದೆಗಳ ಸಂಖ್ಯೆಗಳು ತಾತ್ಕಾಲಿಕವಾಗಿದ್ದು, ನಿಜವಾದ ಅಗತ್ಯವನ್ನು ಆಧರಿಸಿ ಬದಲಾಗಬಹುದು. ಮೀಸಲಾತಿ ವರ್ಗದ ಅಭ್ಯರ್ಥಿಗಳು ತಮ್ಮ ರಾಜ್ಯಗಳಲ್ಲಿ ಘೋಷಿಸಲಾದ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಈ ಮುಂದಿನ ಲಿಂಕ್ ಬಳಸಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.

ಅಭ್ಯರ್ಥಿಗಳು 22 ಜೂನ್ 2026 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ, ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ ಹಾಗೂ ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

📌 ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ಜೂನ್ 2026

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22 ಜೂನ್ 2026

ಪರೀಕ್ಷೆಯ ದಿನಾಂಕ: 2026 ಜುಲೈ ಮೊದಲನೇ ವಾರ

📌 ಪ್ರಮುಖ ಲಿಂಕ್ಗಳು

ನೋಂದಣಿ ಲಿಂಕ್: https://nats.education.gov.in/

BFSI SSC ಪೋರ್ಟಲ್‌ಗಾಗಿ ಆನ್‌ಲೈನ್ ಅರ್ಜಿ ಲಿಂಕ್: https://bfsissc.com/

BEEP ಪೋರ್ಟಲ್‌ಗಾಗಿ ಆನ್‌ಲೈನ್ ಅರ್ಜಿ ಲಿಂಕ್: https://beep.bfsissc.com/

ಅಧಿಕೃತ ವೆಬ್‌ಸೈಟ್: centralbankofindia.co.in

📌 ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆಯ ಹೆಸರು: ಅಪ್ರೆಂಟಿಸ್ (Apprentice)

ಒಟ್ಟು ಹುದ್ದೆಗಳ ಸಂಖ್ಯೆ: 4,500

ಉದ್ಯೋಗ ಸ್ಥಳ: ಅಖಿಲ ಭಾರತ

ಮಾಸಿಕ ವೇತನ: ರೂ. 15,000/-

📌 ಹುದ್ದೆಗಳ ವಿವರ

 

 

 

📌 ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪದವಿ (ಉಡಿಚಿಜuಚಿಣioಟಿ) ಪೂರ್ಣಗೊಳಿಸಿರಬೇಕು.

📌 ವಯೋಮಿತಿ

ಅಭ್ಯರ್ಥಿಯು 31 ಮೇ 2026 ರಂತೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ವಯಸ್ಸಿನವರಾಗಿರಬೇಕು.

ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷಗಳು

ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷಗಳು

ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು

ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷಗಳು

ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ: 15 ವರ್ಷಗಳು

📌 ಅರ್ಜಿ ಶುಲ್ಕ

ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ (ಪುರುಷ) ಅಭ್ಯರ್ಥಿಗಳಿಗೆ: ರೂ. 800/- (+ಉSಖಿ)

ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ (ಮಹಿಳಾ) ಅಭ್ಯರ್ಥಿಗಳಿಗೆ: ರೂ. 600/- (+ಉSಖಿ)

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: ರೂ. 200/- (+ಉSಖಿ)

(ಪಾವತಿ ವಿಧಾನ: ಆನ್‌ಲೈನ್ ಮೂಲಕ ಮಾತ್ರ ಪಾವತಿಸತಕ್ಕದ್ದು).

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News