ಪ್ರಮುಖ ಸರ್ಕಾರಿ ಬ್ಯಾಂಕ್‌ಗಳಿಗೆ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?
ಸಾಂದರ್ಭಿಕ ಚಿತ್ರ | Photo Credit : magnific
ದೇಶದ ಪ್ರಮುಖ ಸರ್ಕಾರಿ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ದೇಶದ ಪ್ರಮುಖ ಸರ್ಕಾರಿ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೃಹತ್ ಅಧಿಸೂಚನೆ ಹೊರಡಿಸಿದೆ. ಪದವೀಧರರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಿದ ನಂತರ ಪರೀಕ್ಷೆ ಬರೆಯಬೇಕಾಗುತ್ತದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯಲ್ಲಿ ಪಾಸಾದ ನಂತರ ಸಂದರ್ಶನವಿರುತ್ತದೆ. ಸಂದರ್ಶನದಲ್ಲಿ ಸಲ್ಲಿಸಿದ ವಿವರಗಳ ದೃಢೀಕರಣ ಮತ್ತು ಪ್ರಶ್ನೆಗಳಿಗೆ ಉತ್ತರಿಸಿ ಪಾಸಾದರೆ ಉದ್ಯೋಗ ದೊರೆಯುತ್ತದೆ. ಅರ್ಹ ಅಭ್ಯರ್ಥಿಗಳು ಈ ಮುಂದಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು: https://ibpsreg.ibps.in/crppoxvijun26/
📌ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ಜುಲೈ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ಜುಲೈ 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 21 ಜುಲೈ 2026
📌ವಿವರಗಳು
ಸಂಸ್ಥೆಯ ಹೆಸರು : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್
ಹುದ್ದೆಗಳ ಸಂಖ್ಯೆ: 6715
ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್/ ಮ್ಯಾನೇಜ್ಮೆಂಟ್ ಟ್ರೈನಿ
ಉದ್ಯೋಗ ಸ್ಥಳ: ಅಖಿಲ ಭಾರತ
📌ಶೈಕ್ಷಣಿಕ ಅರ್ಹತೆ
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
📌ವಯೋಮಿತಿ
ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
📌ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷಗಳು
ಎಸ್ಸಿ/ಎಸ್ಟಿ/ಇಎಸ್ಎಂ ಅಭ್ಯರ್ಥಿಗಳಿಗೆ: 05 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: 10 ವರ್ಷಗಳು
📌ಆಕರ್ಷಕ ವೇತನ
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭದಲ್ಲೇ 48,480– 85,920 ರೂ. ವರೆಗೆ ವೇತನ ಸಿಗಲಿದೆ
📌ಆಯ್ಕೆ ವಿಧಾನ
* ಪೂರ್ವಭಾವಿ ಪರೀಕ್ಷೆ
* ಮುಖ್ಯ ಪರೀಕ್ಷೆ
* ಸಂದರ್ಶನ
📌ಅರ್ಜಿ ಶುಲ್ಕ
ಎಸ್ಸಿ/ಎಸ್ಟಿ/ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: 175 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ (ಜನರಲ್/ಒಬಿಸಿ/ಇಡಬ್ಲ್ಯುಎಸ್): 850 ರೂ.
📌ಅರ್ಜಿ ಸಲ್ಲಿಸುವುದು ಹೇಗೆ?
* ಮೊದಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
* ನಿಮ್ಮ ಇತ್ತೀಚಿನ ಫೋಟೋ, ಸಹಿ, ಇಮೇಲ್ ಐಡಿ ಮತ್ತು ಅಗತ್ಯ ಶೈಕ್ಷಣಿಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
* ಮೇಲೆ ನೀಡಲಾಗಿರುವ ಲಿಂಕ್ ಬಳಸಿ ಆನ್‌ಲೈನ್ ಅರ್ಜಿಯನ್ನು ನಿಖರವಾಗಿ ಭರ್ತಿ ಮಾಡಿ.
* ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ‘Submit’ ಬಟನ್ ಕ್ಲಿಕ್ ಮಾಡಿ.
* ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಮುದ್ರಣವನ್ನು ತೆಗೆದುಕೊಳ್ಳುವುದನ್ನು ಮರೆಯಬೇಡಿ.