×
Ad

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Update: 2026-05-21 22:06 IST

Photo Credit : cetonline.karnataka.gov.in

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆಯ ಪ್ರಕಾರ ಒಟ್ಟು 6 ಹುದ್ದೆಗಳು ಖಾಲಿ ಇವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ನೇರ ನೇಮಕಾತಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚನೆಯ ಪ್ರಕಾರ ಒಟ್ಟು 6 ಹುದ್ದೆಗಳು ಖಾಲಿ ಇವೆ. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಮುಂದಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು: https://cetonline.karnataka.gov.in/kea/kearpcrec2026

📌 ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ: 20 ಮೇ 2026

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 03 ಜೂನ್ 2026

ಶುಲ್ಕ ಪಾವತಿಗೆ ಕೊನೆಯ ದಿನಾಂಕ: 04 ಜೂನ್ 2026 (ಸಂಜೆ 4 ಗಂಟೆಯೊಳಗೆ)

📌 ಎಫ್‌ಡಿಎ, ಎಸ್‌ಡಿಎ ನೇಮಕಾತಿ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)

ವೇತನ ಶ್ರೇಣಿ: ₹34,100 – ₹83,700

ಹುದ್ದೆಗಳ ಸಂಖ್ಯೆ: 6

ಉದ್ಯೋಗ ಸ್ಥಳ: ಕರ್ನಾಟಕ

📌 ಹುದ್ದೆಗಳ ವಿವರ

ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ): 2

ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ): 4

📌 ಶೈಕ್ಷಣಿಕ ಅರ್ಹತೆ

ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ): ಯುಜಿಸಿಯಿಂದ ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯದಿಂದ ಪದವಿ ಕಡ್ಡಾಯವಾಗಿ ಹೊಂದಿರಬೇಕು.

ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ): ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು.

📌 ಗರಿಷ್ಠ ವಯೋಮಿತಿಯ ವಿವರ

ಸಾಮಾನ್ಯ ಅರ್ಹತೆಯ (ಜಿಎಂ) ಅಭ್ಯರ್ಥಿಗಳು: 40 ವರ್ಷ

ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 43 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳು: 45 ವರ್ಷ

📌 ಅರ್ಜಿ ಶುಲ್ಕ

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕು.

ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (2ಎ/2ಬಿ/3ಎ/3ಬಿ): ₹750 (₹500 ಅರ್ಜಿ ಶುಲ್ಕ + ₹250 ಪ್ರಕ್ರಿಯೆ ಶುಲ್ಕ)

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯ ಲಿಂಗದ ಅಭ್ಯರ್ಥಿಗಳು: ₹500 (₹250 ಅರ್ಜಿ ಶುಲ್ಕ + ₹250 ಪ್ರಕ್ರಿಯೆ ಶುಲ್ಕ)

ವಿಶೇಷ ಚೇತನ ಅಭ್ಯರ್ಥಿಗಳು: ₹250 ಪ್ರಕ್ರಿಯೆ ಶುಲ್ಕ ಮಾತ್ರ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News