×
Ad

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ

Update: 2026-05-13 16:36 IST

Photo Credit : https://powermedia.info/

2026ನೇ ಸಾಲಿನ ಎಸ್ಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಶೇ 90ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ರಾಜ್ಯದಲ್ಲಿ ಕಾರ್ಯರ್ನಿಹಿಸುತ್ತಿರುವ ಖಾಯಂ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 2026ನೇ ಸಾಲಿನ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಇತ್ತೀಚೆಗಷ್ಟೇ ಪ್ರಕಟವಾದ 2026ನೇ ಸಾಲಿನ ಎಸ್ಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಈ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಅಭ್ಯರ್ಥಿಗಳು ಈ ಮುಂದಿನ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಬಹುದು: https://powermedia.info/

ಅರ್ಜಿ ಸಲ್ಲಿಸಲು 2026 ಮೇ 25ರ ಕಡೆಯ ದಿನವಾಗಿದ್ದು, ಕಡ್ಡಾಯವಾಗಿ ಆನ್ಲೈನ್ ಮೂಲಕವೇ ನಿಗದಿತ ದಾಖಲೆಗಳೊಂದಿಗೆ ಅರ್ಜಿಯನ್ನು ಅಪ್ಲೋಡ್ ಮಾಡಬೇಕಿದೆ.

📌 ಸಂಕ್ಷಿಪ್ತ ವಿವರ

ಪುರಸ್ಕಾರ ನೀಡುವ ಸಂಸ್ಥೆ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು

ಕಾರ್ಯಕ್ರಮದ ಹೆಸರು: ಎಸ್ಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ- 2026

ಫಲಾನುಭವಿಗಳು: ಕಾಯಂ ರಾಜ್ಯ ಸರ್ಕಾರಿ ನೌಕರರ ಮಕ್ಕಳು

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-05-2026

📌 ಶೈಕ್ಷಣಿಕ ಮತ್ತು ಇತರೆ ಅರ್ಹತೆಗಳು

ವಿದ್ಯಾರ್ಥಿಗಳು 2026ನೇ ಸಾಲಿನ ಎಸ್ಎಸ್ಎಲ್ಸಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗಿರಬೇಕು ಹಾಗೂ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.

ಗಮನಿಸಿ: ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಮಕ್ಕಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

📌 ಅಗತ್ಯ ದಾಖಲೆಗಳು

* ವಿದ್ಯಾರ್ಥಿಯ ಇತ್ತೀಚೆಗಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ.

* ಶಾಲಾ ಅಥವಾ ಕಾಲೇಜಿನಿಂದ ದೃಢೀಕರಿಸಲಾದ ಅಂಕಪಟ್ಟಿ

* ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ತಾಲೂಕು/ಯೋಜನಾ ಶಾಖೆ ಅಧ್ಯಕ್ಷರು ಅಥವಾ ಬೆಂಗಳೂರು ನಗರ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ

* ಈ ಮೇಲಿನ ಎಲ್ಲಾ ದಾಖಲೆಗಳನ್ನು 1ಎಂಬಿಗಿಂತ ಕಡಿಮೆ ಗಾತ್ರದಲ್ಲಿ ಜೆಪಿಜಿ ಫಾರ್ಮೇಟ್ನಲ್ಲಿ ಅಪ್ಲೋಡ್ ಮಾಡಬೇಕು.

* ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ನಂತರ ನೌಕರರ ಇಮೇಲ್ ಗೆ ಸ್ವೀಕೃತಿ ರವಾನೆಯಾಗಲಿದೆ.

📌 ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ಲಿಂಕ್ಗಳು: https://powermedia.info/

ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ. ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.

📌 ಸಹಾಯವಾಣಿ

ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ ಸಂಪರ್ಕಿಸಿ 080 22354784/83

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News