SDA ಹುದ್ದೆಗಳ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್ ಮತ್ತು ಇಲಾಖೆಗಳಲ್ಲಿ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ (SDA) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹೈಕೋರ್ಟ್‌ನಲ್ಲಿ 20 ಎಸ್ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಖಾಲಿ ಇರುವ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ 13 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸೆಪ್ಟೆಂಬರ್ 11 ರೊಳಗೆ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬೇಕಿದೆ. ಕೇವಲ ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಪ್ರಯತ್ನಿಸಬಹುದು. ಉಳಿಕೆ ಮೂಲ ವೃಂದದಡಿ 18 ಹಾಗೂ ಕಲ್ಯಾಣ ಕರ್ನಾಟಕ ಬ್ಯಾಕ್ ಲಾಗ್ ಅಡಿ 2 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಸಕ್ತರು ಈ ಮುಂದಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು: https://judiciary.karnataka.gov.in/recsubnotify.php?p=1285&stateNM=
ಪ್ರಮುಖ ದಿನಾಂಕಗಳು
• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 2026 ಆಗಸ್ಟ್ 13
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2026 ಸೆಪ್ಟೆಂಬರ್ 11
ಸಂಕ್ಷಿಪ್ತ ವಿವರಗಳು
• ಸಂಸ್ಥೆಯ ಹೆಸರು: ಕರ್ನಾಟಕ ಹೈಕೋರ್ಟ್
• ಹುದ್ದೆಯ ಹೆಸರು: ದ್ವಿತೀಯ ದರ್ಜೆ ಸಹಾಯಕ (SDA)
• ಖಾಲಿ ಹುದ್ದೆಗಳ ಸಂಖ್ಯೆ: 20 (ಉಳಿಕೆ-18, ಕಲ್ಯಾಣ ಕರ್ನಾಟಕ-2)
• ಹುದ್ದೆಯ ಸ್ಥಳ: ಕರ್ನಾಟಕ
• ಮಾಸಿಕ ವೇತನ: 25,500 ರೂ. ರಿಂದ 81,100 ರೂ.
• ಅಧಿಕೃತ ವೆಬ್ ಸೈಟ್: judiciary.karnataka.gov.in
ಶೈಕ್ಷಣಿಕ ಅರ್ಹತೆ
• ಎಸ್ ಡಿ ಎ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ವಿಜ್ಞಾನ, ಕಲೆ, ವಾಣಿಜ್ಯ, ಬಿಸಿಎ, ಬಿಬಿಎ ಅಥವಾ ಬಿಬಿಎಂ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
• ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಪದವಿಯಲ್ಲಿ ಕನಿಷ್ಠ ಶೇಕಡಾ 55 ರಷ್ಟು ಅಂಕ ಪಡೆದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇಕಡಾ 50 ರಷ್ಟು ಅಂಕ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಕಂಪ್ಯೂಟರ್ ಬಳಕೆಯ ಮೂಲ ಜ್ಞಾನ ಇರುವುದು ಕಡ್ಡಾಯ.
ವಯೋಮಿತಿ
• ಸರ್ಕಾರದ ಆದೇಶದಂತೆ ಈ ಬಾರಿ ಎಲ್ಲಾ ವರ್ಗದವರಿಗೂ ಒಂದು ಬಾರಿಯ ಕ್ರಮವಾಗಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದವರಿಗೆ ಗರಿಷ್ಠ 40 ವರ್ಷ (ಸಡಿಲಿಕೆ ಸೇರಿ) ವಯೋಮಿತಿ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ (ಸಡಿಲಿಕೆ ಸೇರಿ) ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ರ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ (ಸಡಿಲಿಕೆ ಸೇರಿ) ಮೀರಿರಬಾರದು.
ಅರ್ಜಿ ಶುಲ್ಕ
• ಸಾಮಾನ್ಯ ವರ್ಗ ಮತ್ತು ಓಬಿಸಿ ಅಭ್ಯರ್ಥಿಗಳು 350 ರೂ. ಶುಲ್ಕ ಪಾವತಿಸಬೇಕು.
• ಎಸ್ಸಿ, ಎಸ್ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿ ಮಾಡಲಾಗಿದೆ.
• ಶುಲ್ಕವನ್ನು ಕೇವಲ ಆನ್‌ಲೈನ್ ಮೂಲಕ ಎಸ್‌ಬಿಐ ಪೇಮೆಂಟ್ ಗೇಟ್‌ವೇ ಬಳಸಿ ಕಟ್ಟಬೇಕು.
ಆಯ್ಕೆ ಪ್ರಕ್ರಿಯೆ
• ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಮುಖವಾಗಿ ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲಿಗೆ ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
• ನಂತರ 80 ಅಂಕಗಳಿಗೆ 90 ನಿಮಿಷಗಳ ಕಾಲ ಲಿಖಿತ ಪರೀಕ್ಷೆ ಇರುತ್ತದೆ. ಇದರಲ್ಲಿ ಇಂಗ್ಲಿಷ್ ಪ್ರಬಂಧ (30 ಅಂಕ), ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದ (30 ಅಂಕ) ಹಾಗೂ ಸಾಮಾನ್ಯ ಜ್ಞಾನ (20 ಅಂಕ) ಇರಲಿದೆ.
• ಪರೀಕ್ಷೆಯಲ್ಲಿ ಪಾಸ್ ಆದವರನ್ನು 1:5 ಅನುಪಾತದಲ್ಲಿ 20 ಅಂಕಗಳ ಸಂದರ್ಶನಕ್ಕೆ ಕರೆಯಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಸೇರಿ ಒಟ್ಟು 100 ಅಂಕಗಳಿಗೆ ಕನಿಷ್ಠ 60 ಅಂಕ ಪಡೆದವರನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
• ಆಸಕ್ತರು ಕರ್ನಾಟಕ ಹೈಕೋರ್ಟ್‌ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ರಿಕ್ರೂಟ್ಮೆಂಟ್ ವಿಭಾಗಕ್ಕೆ ಹೋದರೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಲಿಂಕ್ ಸಿಗುತ್ತದೆ.
• ನಿಮ್ಮ ವೈಯಕ್ತಿಕ ವಿವರಗಳು, ಅಂಕಗಳ ಮಾಹಿತಿಯನ್ನು ನಮೂದಿಸಿ.
• ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ ಹಾಗೂ ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
• ಕೊನೆಯದಾಗಿ ಆನ್‌ಲೈನ್ ನಲ್ಲಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಬ್ಮಿಟ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.