×
Ad

ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

Update: 2026-02-22 17:08 IST

Photo Credit : karnatakaone.gov.in

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಆನೇಕಲ್ ತಾಲೂಕಿನ ಆನೇಕಲ್, ಅತ್ತಿಬೆಲೆ, ಬೊಮ್ಮಸಂದ್ರ, ಚಂದಾಪುರ, ಜಿಗಣಿ, ಹೆಬ್ಬುಗೂಡಿ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವಾರ, ಮಾದನಾಯಕನಹಳ್ಳಿ. ಬೆಂಗಳೂರು ದಕ್ಷಿಣ ತಾಲೂಕಿನ ಕೋನಪ್ಪನ ಅಗ್ರಹಾರ, ದೊಡ್ಡತೋಗೂರು ಮತ್ತು ಯಲಹಂಕ ತಾಲೂಕಿನ ಹುಣಸಮಾರನಹಳ್ಳಿ ಇಲ್ಲಿ ಖಾಲಿ ಇರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಬಹುದು.

ಅಭ್ಯರ್ಥಿಗಳು ವೆಬ್‍ಸೈಟ್ https://www.karnatakaone.gov.in/public/ franchiseeTerms ನಲ್ಲಿ ಮಾ.2ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News