ಭಾರತದ ಜೊತೆಗಿನ ಸಂಘರ್ಷದಲ್ಲಿ 11 ಸೈನಿಕರು ಮೃತಪಟ್ಟಿದ್ದಾರೆ: ಪಾಕಿಸ್ತಾನ
PC : X\ @FahimSattarDal
ಇಸ್ಲಾಮಾಬಾದ್: ಭಾರತದ ಜೊತೆಗಿನ ಘರ್ಷಣೆಯಲ್ಲಿ 11 ಪಾಕ್ ಸೈನಿಕರು ಮೃತಪಟ್ಟಿದ್ದಾರೆ ಮತ್ತು 78 ಸೈನಿಕರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ತಿಳಿಸಿದೆ.
ಮೇ 6 ಮತ್ತು 7ರ ರಾತ್ರಿ ಭಾರತ ನಡೆಸಿದ ದಾಳಿಯಲ್ಲಿ 40 ನಾಗರಿಕರು ಮೃತಪಟ್ಟಿದ್ದಾರೆ ಮತ್ತು 121 ಮಂದಿ ಗಾಯಗೊಂಡಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ನಾಲ್ಕು ದಿನಗಳ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಶನಿವಾರ ಕದನ ವಿರಾಮ ಒಪ್ಪಂದ ಮಾಡಿಕೊಂಡಿದೆ.
ಮಾತೃಭೂಮಿಯನ್ನು ರಕ್ಷಿಸುವಾಗ ಪಾಕಿಸ್ತಾನದ ಸಶಸ್ತ್ರ ಪಡೆಯ ಸ್ಕ್ವಾಡ್ರನ್ ಲೀಡರ್ ಉಸ್ಮಾನ್ ಯೂಸುಫ್, ಮುಖ್ಯ ತಂತ್ರಜ್ಞ ಔರಂಗಜೇಬ್, ಹಿರಿಯ ತಂತ್ರಜ್ಞ ನಜೀಬ್, ಫಾರೂಕ್, ಮುಬಾಶಿರ್, ಅಬ್ದುಲ್ ರೆಹಮಾನ್, ಲ್ಯಾನ್ಸ್ ನಾಯಕ್ ದಿಲಾವರ್ ಖಾನ್, ಲ್ಯಾನ್ಸ್ ನಾಯಕ್ ಇಕ್ರಮುಲ್ಲಾ, ವಕಾರ್ ಖಾಲಿದ್, ಮುಹಮ್ಮದ್ ಅದೀಲ್ ಅಕ್ಬರ್ ಮತ್ತು ನಿಸಾರ್ ಮೃತಪಟ್ಟಿದ್ದಾರೆ. 78 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.