×
Ad

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಸ್ ಕಂದಕಕ್ಕೆ ಉರುಳಿ 29 ಮಂದಿ ಮೃತ್ಯು

Update: 2024-08-25 14:09 IST

PC : indiatvnews.com

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ರವಿವಾರ ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 29 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಸ್ ಹವೇಲಿ ಕಹುಟಾದಿಂದ ರಾವಲ್ಪಿಂಡಿಗೆ 30 ಪ್ರಯಾಣಿಕರೊಂದಿಗೆ ಪ್ರಯಾಣಿಸುತ್ತಿತ್ತು ಎಂದು ಮೂಲಗಳನ್ನು ಉಲ್ಲೇಖಿಸಿ ಜಿಯೋ ನ್ಯೂಸ್ ವರದಿ ಮಾಡಿದೆ. ಪಾನಾ ಸೇತುವೆ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕಣಿವೆ ಪ್ರದೇಶದಲ್ಲಿ ಸಂಭವಿಸಿದ ಅಪಘಾತಕ್ಕೆ ಕಾರಣ ಇನ್ನೂ ಪತ್ತೆಯಾಗಿಲ್ಲ.

ಸ್ಥಳೀಯರು ಬಸ್‌ನಿಂದ ಮೃತದೇಹಗಳನ್ನು ಹೊರತರುತ್ತಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ತೆರಳುತ್ತಿವೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News