×
Ad

ಮೋರ್ಗನ್ ವಿವಿಯಲ್ಲಿ ಶೂಟೌಟ್ 4 ಮಂದಿಗೆ ಗಾಯ

Update: 2023-10-04 22:34 IST

Photocredit :hindustantimes.com

ವಾಷಿಂಗ್ಟನ್: ಅಮೆರಿಕದ ಬಾಲ್ಟಿಮೋರ್ ನಗರದಲ್ಲಿರುವ ಮೋರ್ಗನ್ ವಿವಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ 4 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.

ವಿಶ್ವವಿದ್ಯಾಲಯದ ಡೈನಿಂಗ್ ಹಾಲ್ನಲ್ಲಿ ಕುಳಿತಿದ್ದವರ ಮೇಲೆ ಗುಂಡು ಹಾರಿಸಲಾಗಿದ್ದು ಶಂಕಿತ ಆರೋಪಿ ವಿವಿಯ ವಿಶ್ರಾಂತಿ ಕೋಣೆಯ ಕಿಟಕಿಯಿಂದ ಗುಂಡು ಹಾರಿಸಿ ಪರಾರಿಯಾಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. 4 ಮಂದಿಗೆ ಅಲ್ಪಪ್ರಮಾಣದ ಗಾಯಗಳಾಗಿದ್ದು ಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಬಾಲ್ಟಿಮೋರ್ ಪೊಲೀಸರ ಹೇಳಿಕೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News