Switzerland| ಕ್ರಾನ್ಸ್–ಮೊಂಟಾನಾದ ಬಾರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತ್ಯು: ವರದಿ
Photo| indiatoday
ಕ್ರಾನ್ಸ್–ಮೊಂಟಾನಾ,ಜ.1: ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದು,100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು indiatoday ವರದಿ ಮಾಡಿದೆ.
ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಬಾರ್‌ನಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ತಿಳಿಸಿರುವ ಬಗ್ಗೆ ವರದಿಯಾಗಿದೆ.
ಘಟನೆಯನ್ನು ಭಯೋತ್ಪಾದಕ ದಾಳಿಯಲ್ಲ ಎಂದು ಸ್ವಿಸ್ ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟದ ಸಮಯದಲ್ಲಿ ಬಾರ್‌ನಲ್ಲಿ 150ಕ್ಕೂ ಹೆಚ್ಚು ಜನರು ಇದ್ದರು. ಸ್ಥಳೀಯ ಮಾಧ್ಯಮಗಳು ಪ್ರಸಾರ ಮಾಡಿದ ವೀಡಿಯೊಗಳಲ್ಲಿ ಸ್ಫೋಟ ಸಂಭವಿಸಿದ ಬಳಿಕ ಕಟ್ಟಡ ಬೆಂಕಿಗಾಹುತಿಯಾಗಿರುವುದು ಕಂಡುಬಂದಿದೆ. ಸ್ಫೋಟದ ಕಾರಣದ ಕುರಿತು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಸಂಗೀತ ಕಾರ್ಯಕ್ರಮದ ಸಮಯದಲ್ಲಿ ಪಟಾಕಿ ಸಿಡಿಸಿದ್ದರಿಂದ ಈ ಸ್ಫೋಟ ಸಂಭವಿಸಿರಬಹುದು ಎಂದು ಸ್ವಿಸ್ ಮಾಧ್ಯಮಗಳು ಅಂದಾಜಿಸಿದೆ. ಆದರೆ ಸ್ಪೋಟಕ್ಕೆ ಕಾರಣ ತಿಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕ್ರಾನ್ಸ್-ಮೊಂಟಾನಾದಲ್ಲಿನ ಆಸ್ಪತ್ರೆಗಳಲ್ಲಿ ಸುಟ್ಟಗಾಯಗಳಿಂದ ಜನರು ತುಂಬಿಕೊಂಡಿದ್ದಾರೆ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.