ಕುವೈಟ್ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ದುರಂತ: ಐದು ಮಂದಿ ಮೃತ್ಯು
Update: 2025-06-01 22:47 IST
Photo : ndtv
ಕುವೈಟ್: ಕುವೈಟ್ ನಗರದ ನೈಋತ್ಯ ದಿಕ್ಕಿನಲ್ಲಿರುವ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಐದು ಮಂದಿ ಸಾವನ್ನಪ್ಪಿರುವುದಾಗಿ ಅಗ್ನಿಶಾಮಕ ದಳದ ಮೂಲಗಳನ್ನು ಉಲ್ಲೇಖಿಸಿ ರವಿವಾರ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
ರಾಜಧಾನಿಯಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ರಿಗ್ಗಾ ಪ್ರದೇಶದಲ್ಲಿ 2 ಅಪಾರ್ಟ್ ಮೆಂಟ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದು ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.