×
Ad

ಇಸ್ರೇಲ್‌ನಿಂದ ಗಾಝಾ ಮೇಲೆ ವೈಮಾನಿಕ ದಾಳಿ: ಕನಿಷ್ಠ 80 ಮಂದಿ ಮೃತ್ಯು

Update: 2025-05-16 11:42 IST

File Photo: PTI

ಗಾಝಾ : ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಗಾಝಾದಾದ್ಯಂತ ಕನಿಷ್ಠ 80 ಫೆಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನ್ ವೈದ್ಯಕೀಯ ಮೂಲಗಳು ತಿಳಿಸಿವೆ.

ದಕ್ಷಿಣ ಗಾಝಾದ ಖಾನ್ ಯೂನಿಸ್ ನಗರದಲ್ಲಿ ಬುಧವಾರ ರಾತ್ರಿಯಿಂದ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 54 ಮಂದಿ ಮೃತಪಟ್ಟಿರುವುದಾಗಿ ನಾಸೆರ್ ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ `ಅಸೋಸಿಯೇಟೆಡ್ ಪ್ರೆಸ್' ವರದಿ ಮಾಡಿತ್ತು. ಇದಲ್ಲದೆ ಗಾಝಾ ನಗರ ಮತ್ತು ಉತ್ತರ ಗಾಝಾದ ಇತರ ಪ್ರದೇಶಗಳಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿದೆ.

ಗಾಝಾ ಮೂಲದ ಆರೋಗ್ಯ ಅಧಿಕಾರಿಗಳ ಪ್ರಕಾರ, ಈ ಪ್ರದೇಶದಲ್ಲಿ ಕ್ಯಾನ್ಸರ್ ರೋಗಿಗಳಿಗೆ ವೈದ್ಯಕೀಯ ಆರೈಕೆಯನ್ನು ಒದಗಿಸುತ್ತಿದ್ದ ಏಕೈಕ ಆಸ್ಪತ್ರೆಯಾದ ಗಾಝಾ ಯುರೋಪಿಯನ್ ಆಸ್ಪತ್ರೆ ಇತ್ತೀಚಿನ ಇಸ್ರೇಲ್‌ ದಾಳಿಯಿಂದಾಗಿ ಸೇವೆಯನ್ನು ಸ್ಥಗಿತಗೊಳಿಸಿದೆ. ಇಸ್ರೇಲ್ ದಾಳಿಗಳಿಂದ ಒಳಚರಂಡಿ ಮಾರ್ಗಗಳು ಸೇರಿದಂತೆ ಮೂಲಸೌಕರ್ಯಗಳಿಗೆ ಗಮನಾರ್ಹ ಹಾನಿಯನ್ನುಂಟುಮಾಡಿದೆ ಎಂದು ಅಧಿಕಾರಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ʼಹಮಾಸ್ ವಿರುದ್ಧದ ಕಾರ್ಯಚರಣೆಯನ್ನು ಮುಂಬರುವ ದಿನಗಳಲ್ಲಿ ಪೂರ್ಣ ಬಲದೊಂದಿಗೆ ನಡೆಸಲಾಗುವುದುʼ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಘೋಷಿಸಿದ ಬೆನ್ನಲ್ಲೇ ಈ ವೈಮಾನಿಕ ದಾಳಿಗಳು ನಡೆದಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News