×
Ad

ಅಮೆರಿಕದ ರೈಲು ನಿಲ್ದಾಣದಲ್ಲಿ ಶೂಟೌಟ್

Update: 2024-02-13 23:01 IST

ನ್ಯೂಯಾರ್ಕ್ : ಅಮೆರಿಕದ ನ್ಯೂಯಾರ್ಕ್ ನಗರದ ಬ್ರಾಂಕ್ಸ್ ಮೆಟ್ರೋ ರೈಲು ನಿಲ್ದಾಣದಲ್ಲಿ ಸೋಮವಾರ ಎರಡು ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮೃತಪಟ್ಟಿದ್ದು ಇತರ 5 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರ ಎರಡು ಗುಂಪಿನ ನಡುವೆ ಆರಂಭವಾದ ಮಾತಿನ ಚಕಮಕಿ ಘರ್ಷಣೆಗೆ ತಿರುಗಿದ್ದು, ಬ್ರಾಂಕ್ಸ್ ನಿಲ್ದಾಣದಲ್ಲಿ ರೈಲಿನ ಬಾಗಿಲು ತೆರೆಯುತ್ತಿದ್ದಂತೆಯೇ ಓರ್ವ ತನ್ನಲ್ಲಿದ್ದ ಗನ್‍ನಿಂದ ಹಾರಿಸಿದ ಗುಂಡು ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕನಿಗೆ ತಗುಲಿದ್ದು ಗಂಭೀರ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. 14 ವರ್ಷದ ಹುಡುಗಿ, 15 ವರ್ಷದ ಹುಡುಗ ಹಾಗೂ ಮೂವರು ವಯಸ್ಕರು ಗಾಯಗೊಂಡಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಗಂಭೀರವಾಗಿದ್ದು ಅಲ್ಲಿಂದ ಪಲಾಯನ ಮಾಡಿದ ಓರ್ವ ಶಂಕಿತ ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News