×
Ad

ಅಮೆರಿಕ : ಗುಂಡಿನ ದಾಳಿಯಲ್ಲಿ 8 ವಿದ್ಯಾರ್ಥಿಗಳಿಗೆ ಗಾಯ

Update: 2024-03-07 22:03 IST

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್: ಅಮೆರಿಕದ ಫಿಲಡೆಲ್ಫಿಯಾ ರಾಜ್ಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಈಶಾನ್ಯ ಫಿಲಡೆಲ್ಫಿಯಾದ ನಾರ್ಥ್‍ಈಸ್ಟ್ ಹೈಸ್ಕೂಲ್‍ನ ವಿದ್ಯಾರ್ಥಿಗಳು ತರಗತಿ ಮುಗಿದ ಬಳಿಕ ಸಮೀಪದ ಬಸ್ಸು ನಿಲ್ದಾಣದಲ್ಲಿ ಸಿಟಿ ಬಸ್‍ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ವ್ಯಕ್ತಿಗಳು ವಿದ್ಯಾರ್ಥಿಗಳತ್ತ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. 8 ವಿದ್ಯಾರ್ಥಿಗಳು ಗಾಯಗೊಂಡಿದ್ದು ಒಬ್ಬನ ಸ್ಥಿತಿ ಗಂಭೀರವಾಗಿದೆ. ಬಸ್ಸು ನಿಲ್ದಾಣದತ್ತ ಸುಮಾರು 30 ಸುತ್ತು ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯ ಬಗ್ಗೆ ಸ್ಥಳದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ನಗರದ ಪೊಲೀಸ್ ಕಮಿಷನರ್ ಕೆವಿನ್ ಬೆಥೆಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಎರಡು ಬಸ್ಸುಗಳಿಗೂ ಗುಂಡೇಟಿನಿಂದ ಹಾನಿಯಾಗಿದೆ ಆದರೆ ಬಸ್ಸಿನಲ್ಲಿದ್ದವರಿಗೆ ಯಾವುದೇ ಸಾವು-ನೋವು ವರದಿಯಾಗಿಲ್ಲ. ಇದು ಕಳೆದ 4 ದಿನಗಳಲ್ಲಿ ಫಿಲಡೆಲ್ಫಿಯಾದಲ್ಲಿ ನಡೆದ 4ನೇ ಗುಂಡಿನ ದಾಳಿಯ ಪ್ರಕರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News