×
Ad

170 ಕ್ಕೂ ಅಧಿಕ ಪ್ರಯಾಣಿಕರಿದ್ದ ಅಮೆರಿಕ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಅವಘಡ

Update: 2025-03-14 11:51 IST

Screengrab: X/@EdKrassen

ಡೆನ್ವರ್: ಗುರುವಾರ ಡೆನ್ವರ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಮೆರಿಕನ್ ಏರ್ ಲೈನ್ಸ್ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕ್ಷಿಪ್ರವಾಗಿ ತೆರವುಗೊಳಿಸಲಾಯಿತು. ಈ ಘಟನೆಯಲ್ಲಿ ಗಾಯಗೊಂಡ 12 ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಡೆನ್ವರ್ ವಿಮಾನ ನಿಲ್ದಾಣ, ಆಸ್ಪತ್ರೆಗಳಿಗೆ ಸಾಗಿಸಲಾದ ಎಲ್ಲ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಹೇಳಿದೆ.

ವಿಮಾನದ ಸಿಬ್ಬಂದಿಗಳು ಇಂಜಿನ್ ಕಂಪಿಸುತ್ತಿದೆ ಎಂದು ವರದಿ ಮಾಡಿದ ಹಿನ್ನೆಲೆಯಲ್ಲಿ, ಕೊಲರಾಡೊ ಸ್ಪ್ರಿಂಗ್ಸ್ ವಿಮಾನ ನಿಲ್ದಾಣದಿಂದ ಡಲ್ಲಾಸ್ ಫೋರ್ಟ್ ವರ್ತ್ ನತ್ತ ತೆರಳುತ್ತಿದ್ದ ವಿಮಾನ ಸಂಖ್ಯೆ 1006 ಅನ್ನು ಡೆನ್ವರ್ ಗೆ ಮಾರ್ಗ ಬದಲಿಸಲಾಯಿತು. ನಂತರ, ಸುಮಾರು ಸಂಜೆ 5.15ರ ವೇಳೆಗೆ ವಿಮಾನ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು ಎಂದು ಫೆಡರಲ್ ಏವಿಯೇಶನ್ ಅಡ್ಮಿನಿಸ್ಟ್ರೇಷನ್ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಮಾನ ನಿಲ್ದಾಣದ ದ್ವಾರದ ಬಳಿ ವಿಮಾನದ ಇಂಜಿನ್ ನಲ್ಲಿ ಬೆಂಕಿ ಹೊತ್ತಿಕೊಂಡಿತು. ತಕ್ಷಣವೇ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ತೆರವುಗೊಳಿಸಲಾಯಿತು ಎಂದು ಫೆಡರಲ್ ಏವಿಯೇಶನ್ ಅಡ್ಮಿನಿಸ್ಟ್ರೇಷನ್ ಹೇಳಿದೆ. 

ತಕ್ಷಣವೇ ವಿಮಾನದಲ್ಲಿದ್ದ 172 ಪ್ರಯಾಣಿಕರು ಹಾಗೂ ಆರು ಮಂದಿ ವಿಮಾನ ಸಿಬ್ಬಂದಿಗಳನ್ನು ಟರ್ಮಿನಲ್ ಗೆ ಕರೆದೊಯ್ಯಲಾಯಿತು ಎಂದು ಅಮೆರಿಕನ್ ಏರ್ ಲೈನ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News