×
Ad

ಅಂಕಿತಾ ಭಂಡಾರಿ ಕೊಲೆ ಪ್ರಕರಣ | ಪೊಲೀಸ್ ತನಿಖೆಯ ಬಗ್ಗೆ ಅವಿಶ್ವಾಸ ಮೂಡಿಸಲು ಯತ್ನಿಸಿದ ಆರೋಪ : ಪತ್ರಕರ್ತನ ಬಂಧನ

Update: 2024-03-08 23:01 IST

ಸಾಂದರ್ಭಿಕ ಚಿತ್ರ

ಡೆಹ್ರಾಡೂನ್ : ಕೊಲೆ ಪ್ರಕರಣವೊಂದರ ವರದಿಗೆ ಸಂಬಂಧಿಸಿ ಉತ್ತರಾಖಂಡ ಪೊಲೀಸರು ಪತ್ರಕರ್ತ ಅಶುತೋಷ್ ನೇಗಿ ಅವರನ್ನು ಶುಕ್ರವಾರ ಬಂಧಿಸಿದ್ದಾರೆ. ಪೌರಿಗಢವಾಲ್ ಜಿಲ್ಲೆಯ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಸಾಪ್ತಾಹಿಕ ಸುದ್ದಿಪತ್ರಿಕೆ ‘ ಜಾಗೋ ಉತ್ತರಾಖಂಡ’ದ ಸಂಪಾದಕರಾದ ಅಶುತೋಷ್ ನೇಗಿಯವರನ್ನು ಬಂಧಿಸಲಾಗಿದೆಯೆಂದು ಆಂಗ್ಲ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನೇಗಿ ಅವರು ತನ್ನ ಪತ್ರಿಕೆಯಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ಪ್ರಕಟಿಸಿರುವುದಕ್ಕಾಗಿ ಅವರ ಬಂಧನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಡೆಸುತ್ತಿರುವ ತನಿಖೆಯ ಬಗ್ಗೆ ಸಾರ್ವಜನಿಕರಲ್ಲಿ ಅಪನಂಬಿಕೆ ಮೂಡಿಸಲು ನೇಗಿ ಯತ್ನಿಸಿದ್ದರೆಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಭಿನವಕುಮಾರ್ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಗಂಗಾ-ಭೋಗಪುರ್ನಲ್ಲಿರುವ ವನತಾರಾ ರೆಸಾರ್ಟ್‌ ನ ರಿಸೆಪ್ಷನಿಸ್ಟ್ ಆಗಿದ್ದ ಅಂಖಿತಾ ಭಂಡಾರಿಯನ್ನು 2022ರ ಸೆಪ್ಟೆಂಬರ್ 18ರಂದು ಅತ್ಯಾಚಾರವೆಸಗಿ ಕೊಲೆಗೈಯ್ಯಲಾಗಿತ್ತು.

ವನತಾರಾ ರೆಸಾರ್ಟ್‌ ನ ಮಾಲಕ ಹಾಗೂ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲಕಿತ್ ಆರ್ಯ, ಈ ಪ್ರಕರಣದ ಮುಖ್ಯ ಆರೋಪಿಯೆಂದು ಪರಿಗಣಿಸಲಾಗಿದೆ. ಆದರೆ ಪೊಲೀಸರು ಪ್ರಕರಣದ ತನಿಖೆಯನ್ನು ಹಾದಿತಪ್ಪಿಸಲು ಯತ್ನಿಸುತ್ತಿದ್ದಾರೆಂದು ಅಶುತೋಷ್ ನೇಗಿ ತನ್ನ ವರದಿಯಲ್ಲಿ ಆರೋಪಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News