×
Ad

ಇಮ್ರಾನ್‍ಖಾನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲು

Update: 2024-10-08 21:55 IST

 ಇಮ್ರಾನ್‍ಖಾನ್ | PC : PTi

ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‍ಖಾನ್ ಹಾಗೂ ಅವರ ಪಕ್ಷದ ಮುಖಂಡ, ಖೈಬರ್ ಪಖ್ತೂಂಕ್ವಾದ ಮುಖ್ಯಮಂತ್ರಿ ಆಲಿ ಅಮಿನ್ ಗಂದಪುರ್ ವಿರುದ್ಧ ಮಂಗಳವಾರ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದೆ.

ಕಳೆದ ವಾರಾಂತ್ಯ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್(ಪಿಟಿಐ) ಪಕ್ಷ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯ ಸಾವಿಗೆ ಸಂಬಂಧಿಸಿ ಕೊಲೆಯತ್ನದ ಹೊಸ ಪ್ರಕರಣ ದಾಖಲಿಸಲಾಗಿದೆ. ಒಂದು ವರ್ಷಕ್ಕೂ ಅಧಿಕ ಸಮಯದಿಂದ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿರುವ ಇಮ್ರಾನ್‍ಖಾನ್ ಅವರ ಬಿಡುಗಡೆಗೆ ಆಗ್ರಹಿಸಿ ಪಿಟಿಐ ಪಕ್ಷ ಕಳೆದ ವಾರಾಂತ್ಯ ನಡೆಸಿದ್ದ ಪ್ರತಿಭಟನಾ ರ‍್ಯಾಲಿಯನ್ನು ತಡೆಯಲು ಪ್ರಯತ್ನಿಸಿದಾಗ ನಡೆದ ಘರ್ಷಣೆಯಲ್ಲಿ ಪೊಲೀಸ್ ಮೃತಪಟ್ಟಿದ್ದು ಇತರ ಹಲವರು ಗಾಯಗೊಂಡಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News