ಬಲೂಚಿಸ್ತಾನ | ಗುಂಡಿನ ದಾಳಿಯಲ್ಲಿ ನ್ಯಾಯಾಧೀಶರ ಹತ್ಯೆ
Update: 2026-07-24 10:40 IST
Photo Credit : aljazeera.com
ಪೇಷಾವರ, ಜು.23: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದ ಮಸ್ತುಂಗ್ ಜಿಲ್ಲೆಯಲ್ಲಿ ನ್ಯಾಯಾಂಗ ತಂಡದ ವಾಹನಗಳನ್ನು ಗುರಿಯಾಗಿಸಿಕೊಂಡು ಶಂಕಿತ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಬಂಡುಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ಸೇವೆಯಲ್ಲಿದ್ದ ಸೆಷನ್ಸ್ ನ್ಯಾಯಾಧೀಶರು ಮತ್ತು ಅವರ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೊಬ್ಬ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಸೇರಿದಂತೆ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕ್ವೆಟ್ಟಾ ಮತ್ತು ಮಸ್ತುಂಗ್ ನಡುವಿನ ಮಾರ್ಗದಲ್ಲಿ ನ್ಯಾಯಾಂಗ ತಂಡವು ಪ್ರಯಾಣಿಸುತ್ತಿದ್ದಾಗ ಈ ದಾಳಿ ನಡೆದಿರುವುದಾಗಿ ವರದಿಯಾಗಿದೆ.