Bangladesh: ಚುನಾವಣೆಗಳಿಗೆ ಶೇಖ್ ಹಸೀನಾ ಪಕ್ಷಕ್ಕೆ ನಿಷೇಧ
Update: 2025-12-25 22:30 IST
ಶೇಖ್ ಹಸೀನಾ | Photo Credit : PTI
ಢಾಕ, ಡಿ.25: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷದ ಚಟುವಟಿಕೆಯ ಮೇಲೆ ನಿಷೇಧ ಹೇರಿರುವುದರಿಂದ 2026ರ ಫೆಬ್ರವರಿಯ ರಾಷ್ಟ್ರೀಯ ಪಾರ್ಲಿಮೆಂಟರಿ ಚುನಾವಣೆಯಲ್ಲಿ ಪಕ್ಷ ಭಾಗವಹಿಸುವುದಿಲ್ಲ ಎಂದು ಬಾಂಗ್ಲಾದೇಶದ ಮಧ್ಯಂತರ ಸರಕಾರ ದೃಢಪಡಿಸಿದೆ.
ಅವಾಮಿ ಲೀಗ್ ಪಕ್ಷದ ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಮತ್ತು ಚುನಾವಣಾ ಆಯೋಗವು ಪಕ್ಷದ ನೋಂದಣಿಯನ್ನು ರದ್ದುಗೊಳಿಸಿರುವುದರಿಂದ ಈ ಚುನಾವಣೆಯಲ್ಲಿ ಅವಾಮಿ ಲೀಗ್ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಪಕ್ಷದ ಮುಖಂಡರ ವಿರುದ್ಧ ಅಂತರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ ನಡೆಸುತ್ತಿರುವ ವಿಚಾರಣೆ ಪೂರ್ಣಗೊಳ್ಳುವವರೆಗೆ ಈ ನಿರ್ಧಾರ ಚಾಲ್ತಿಯಲ್ಲಿರುತ್ತದೆ ಎಂದು ಹೇಳಿಕೆ ತಿಳಿಸಿದೆ.