×
Ad

ಬಾಂಗ್ಲಾದೇಶದ ಶಾಲೆಗಳಲ್ಲಿ ಸಂಗೀತ, ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ರದ್ದು

Update: 2025-11-04 22:11 IST

ಢಾಕಾ, ನ.4: ಸರಕಾರಿ ಸ್ವಾಮ್ಯದ ಪ್ರಾಥಮಿಕ ಶಾಲೆಗಳಲ್ಲಿ ಸಂಗೀತ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಬಾಂಗ್ಲಾದೇಶದ ಮಧ್ಯಂತರ ಸರಕಾರ ರದ್ದುಗೊಳಿಸಿರುವುದಾಗಿ ವರದಿಯಾಗಿದೆ.

ಹೊಸ ನೇಮಕಾತಿ ನಿಯಮಗಳ ಪ್ರಕಾರ ಸಂಗೀತ ಮತ್ತು ದೈಹಿಕ ಶಿಕ್ಷಣಕ್ಕಾಗಿ ಶಿಕ್ಷಕರನ್ನು ನೇಮಕ ಮಾಡುವ ಅಗತ್ಯವಿರುವುದಿಲ್ಲ ಎಂದು ಪ್ರಾಥಮಿಕ ಮತ್ತು ಸಾಮಾನ್ಯ ಶಿಕ್ಷಣ ಇಲಾಖೆ ಘೋಷಿಸಿದೆ. ಕಳೆದ ಆಗಸ್ಟ್‌ನಲ್ಲಿ ಇಲಾಖೆ ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ ಸಂಗೀತ ಮತ್ತು ದೈಹಿಕ ಶಿಕ್ಷಕರ ನೇಮಕಾತಿಯೂ ಸೇರಿತ್ತು. ಇದನ್ನು ವಿರೋಧಿಸಿ ಧಾರ್ಮಿಕ ಗುಂಪುಗಳು ಪ್ರತಿಭಟನೆ ನಡೆಸಿದ್ದವು. ಇದೀಗ ತಿದ್ದುಪಡಿ ಮಾಡಿದ ಹೊಸ ನಿಯಮಗಳಲ್ಲಿ ಇದು ಸೇರಿಲ್ಲ ಎಂದು ಇಲಾಖೆಯ ಸಚಿವ ಮಸೂದ್ ಅಖ್ತರ್‍ಖಾನ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News