ಬಾಂಗ್ಲಾದೇಶ | 2026ರ ಫೆಬ್ರವರಿ ಮೊದಲ ವಾರದಲ್ಲಿ ಸಾರ್ವತ್ರಿಕ ಚುನಾವಣೆ: ವರದಿ
Update: 2025-08-10 23:08 IST
ಢಾಕಾ, ಆ.10: ಬಾಂಗ್ಲಾದೇಶದಲ್ಲಿ 2026ರ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿರುವುದಾಗಿ ಚುನಾವಣಾ ಆಯೋಗದ ಮುಖ್ಯಸ್ಥರು ಶನಿವಾರ ಹೇಳಿದ್ದು ಆದರೆ ಅದನ್ನು ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ನಡೆಸುವುದು ಒಂದು ದೊಡ್ಡ ಸವಾಲಾಗಿ ಉಳಿದಿದೆ ಎಂದಿದ್ದಾರೆ.
ಚುನಾವಣಾ ವ್ಯವಸ್ಥೆ, ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವ ಅಧಿಕಾರ ವರ್ಗದವರಲ್ಲಿ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಆದರೂ ವಿಶ್ವಾಸವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಅವಿರತ ಕಾರ್ಯನಿರ್ವಹಿಸುತ್ತಿದೆ. ವೇಳಾಪಟ್ಟಿಯನ್ನು ಘೋಷಿಸುವ ಎರಡು ತಿಂಗಳ ಮೊದಲು ನಿಖರವಾದ ದಿನಾಂಕವನ್ನು ಬಹಿರಂಗಪಡಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ನಾಸಿರ್ ಉದ್ದೀನ್ ಹೇಳಿರುವುದಾಗಿ ಸರಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ವರದಿ ಮಾಡಿದೆ.