×
Ad

ಬಾಂಗ್ಲಾ: ಪ್ರಧಾನಿಯಾಗಿ ಶೇಖ್ ಹಸೀನಾ ಪ್ರಮಾಣ ವಚನ

Update: 2024-01-11 22:59 IST

ಶೇಖ್ ಹಸೀನಾ |  Photo: X

ಢಾಕ : ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ದಾಖಲೆಯ 5ನೇ ಬಾರಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಾಂಗ್ಲಾದೇಶದ ಅಧ್ಯಕ್ಷೀಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 76 ವರ್ಷದ ಹಸೀನಾ ಅವರಿಗೆ ಅಧ್ಯಕ್ಷ ಮುಹಮ್ಮದ್ ಶಹಾಬುದ್ದೀನ್ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ರಾಜಕೀಯ ಮುಖಂಡರು, ವಿದೇಶಿ ರಾಜತಾಂತ್ರಿಕರು, ನಾಗರಿಕ ಸಮಾಜದ ಮುಖಂಡರು, ಹಿರಿಯ ಅಧಿಕಾರಿಗಳು ಹಾಗೂ ಮಿಲಿಟರಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಮುಖ ವಿರೋಧ ಪಕ್ಷಗಳ ಬಹಿಷ್ಕಾರದ ನಡುವೆ ರವಿವಾರ ನಡೆದ ಮತದಾನದಲ್ಲಿ ಹಸೀನಾ ಅವರ ಅವಾಮಿ ಲೀಗ್ ಪಕ್ಷ ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News