×
Ad

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ

Update: 2025-11-27 14:06 IST

PC: x.com/NBCNews

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ದಾಖಲಾದ ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ ನ್ಯಾಯಾಲಯವು ಗುರುವಾರ ಒಟ್ಟು 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ಮಾಹಿತಿ ನೀಡಿವೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸರ್ಕಾರಿ ಸ್ವಾಮ್ಯದ ಬಿಎಸ್‌ಎಸ್ ಸುದ್ದಿ ಸಂಸ್ಥೆಯ ಮಾಹಿತಿಯ ಪ್ರಕಾರ, ಪುರ್ಬಚೋಲ್ ಪ್ರದೇಶದ ರಾಜುಕ್ ನ್ಯೂ ಟೌನ್ ಯೋಜನೆಯಲ್ಲಿ ನಿವೇಶನ ಹಂಚಿಕೆ ಸಂಬಂಧ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಈ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಹಸೀನಾ ಪ್ರಸ್ತುತ ಪರಾರಿಯಾಗಿರುವುದರಿಂದ ಮತ್ತು ವಿಚಾರಣೆ ವೇಳೆ ಹಾಜರಾಗದ ಕಾರಣ, ನ್ಯಾಯಾಲಯವು ಗೈರುಹಾಜರಿಯಲ್ಲಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.

ಪ್ರತಿ ಪ್ರಕರಣದಲ್ಲೂ ನ್ಯಾಯಾಧೀಶರು ಏಳು ವರ್ಷಗಳ ಜೈಲು ಶಿಕ್ಷೆ ಘೋಷಿಸಿದ್ದು, ಒಟ್ಟಾರೆ ಹಸೀನಾಗೆ 21 ವರ್ಷಗಳ ಶಿಕ್ಷೆ ವಿಧಿಸಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News