ಆಪರೇಷನ್ ಸಿಂಧೂರ್‌ನಲ್ಲಿ ಭಾರತ ಇಸ್ರೇಲ್‌ನ ಶಸ್ತ್ರಾಸ್ತ್ರ ಬಳಸಿತ್ತು: ನೆತನ್ಯಾಹು
Update: 2025-08-07 22:15 IST
Photo : PTI
ಜೆರುಸಲೇಂ, ಆ.7: ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಮೇಲೆ ನಡೆಸಿದ `ಆಪರೇಷನ್ ಸಿಂಧೂರ್' ಕಾರ್ಯಾಚರಣೆಯಲ್ಲಿ ಭಾರತವು ಇಸ್ರೇಲ್‌ನ ಶಸ್ತ್ರಾಸ್ತ್ರಗಳನ್ನು ಬಳಸಿರುವುದನ್ನು ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಒಪ್ಪಿಕೊಂಡಿದ್ದಾರೆ.
ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಜೊತೆ ಜಂಟಿಯಾಗಿ ಅಭಿವೃದ್ಧಿಪಡಿಸಿದ ಹಾರ್ಪಿ ಡ್ರೋನ್‌ಗಳು ಹಾಗೂ ಬರಾಕ್ -8 ಕ್ಷಿಪಣಿಗಳನ್ನು ಭಾರತ ಬಳಸಿದೆ. ನಾವು ಈ ಹಿಂದೆಯೇ ಒದಗಿಸಿದ್ದ ವಿಷಯಗಳು ಯುದ್ಧಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿವೆ' ಎಂದು ನೆತನ್ಯಾಹು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.