×
Ad

ಬೈಡನ್ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡುವುದಿಲ್ಲ: ಸುಲಿವಾನ್

Update: 2023-12-15 23:48 IST

ಜೋ ಬೈಡನ್ | Photo: PTI

ವಾಷಿಂಗ್ಟನ್: ಅಧ್ಯಕ್ಷ ಜೋ ಬೈಡನ್ ಭಾರತದ ಪ್ರಧಾನಿ ನರೇಂದ್ರ ಮೋದಿಯ ಜತೆಗೆ ನಿಕಟ ವೈಯಕ್ತಿಕ ಬಂಧವನ್ನು ಹಂಚಿಕೊಂಡಿದ್ದಾರೆ. ಆದರೆ ಅವರು ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡುವುದಿಲ್ಲ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾಕ್ ಸುಲಿವಾನ್ ಹೇಳಿದ್ದಾರೆ.

ಬೈಡನ್ ಭಾರತದೊಂದಿಗೆ ಬಾಂಧವ್ಯವನ್ನು ಗಾಢವಾಗಿಸಲು ವೈಯಕ್ತಿಕವಾಗಿ ಬದ್ಧವಾಗಿದ್ದಾರೆ. ನಿಗದಿತ ಕಾರ್ಯಕ್ರಮಗಳ ಒತ್ತಡದಿಂದಾಗಿ ಜನವರಿ ಅಂತ್ಯದಲ್ಲಿ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ ಎಂದು ಭಾರತೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಸುಲಿವಾನ್ ಹೇಳಿರುವುದಾಗಿ `ಹಿಂದುಸ್ತಾನ್ ಟೈಮ್ಸ್' ವರದಿ ಮಾಡಿದೆ.

ದಿಲ್ಲಿಯಲ್ಲಿ ನಡೆದಿದ್ದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಅಧ್ಯಕ್ಷ ಬೈಡನ್ರನ್ನು ಭೇಟಿಯಾಗಿದ್ದ ಪ್ರಧಾನಿ ಮೋದಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಬೈಡನ್ರನ್ನು ಆಹ್ವಾನಿಸಿದ್ದಾರೆ ಎಂದು ಭಾರತಕ್ಕೆ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟಿ ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News