ಕಾಬೂಲ್‌ನ ಹೋಟೆಲ್‌ವೊಂದರಲ್ಲಿ ಬಾಂಬ್ ಸ್ಫೋಟ: ಹಲವರು ಮೃತಪಟ್ಟಿರುವ ಶಂಕೆ
Update: 2026-01-19 19:15 IST
PC | x.com/thesurepath1
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಶಹರ್ ಎ ನಾವ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವರು ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಆಂತರಿಕ ಸಚಿವಾಲಯ ತಿಳಿಸಿದೆ.
ಸ್ಪೋಟದಲ್ಲಿ ಹಲವರು ಮೃತಪಟ್ಟಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ಮತೀನ್ ಖಾನಿ ತಿಳಿಸಿದ್ದಾರೆ.
ಶಹರೆ ಎ ನಾವ್ ಪ್ರದೇಶವು ಕಾಬೂಲ್‌ನಲ್ಲಿ ಅತ್ಯಂತ ಸುರಕ್ಷಿತ ಪ್ರದೇಶಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.
ಗುಲ್ಫರೋಶಿ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಸಾವುನೋವುಗಳು ಸಂಭವಿಸಿವೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.