Photo Credit : AP

ನ್ಯೂಯಾರ್ಕ್: ನ್ಯೂಯಾರ್ಕ್ ನಗರದ ಬ್ರೂಕ್ಲಿನ್‍ನಲ್ಲಿ ಬುಧವಾರ ಕಟ್ಟಡವೊಂದು ಕುಸಿದ ಪರಿಣಾಮ ಕನಿಷ್ಠ ಎಂಟು ಜನರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫ್ಲಾಟ್‍ಬುಷ್ ಮತ್ತು ಬೆಡ್‍ಫೋರ್ಡ್ ಅವೆನ್ಯೂಗಳ ಕೂಡುರಸ್ತೆಯಲ್ಲಿರುವ ಮೂರು ಅಂತಸ್ತಿನ ಕಟ್ಟಡವು ಕುಸಿದುಬಿದ್ದಿದೆ. ಆ ಸಮಯದಲ್ಲಿ ಅಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದ ಪಕ್ಕದಲ್ಲೇ ಇರುವ ಮತ್ತೊಂದು ಮೂರು ಅಂತಸ್ತಿನ ಕಟ್ಟಡದ ಗೋಡೆಯೂ ಕುಸಿದಿದೆ. ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದರು.

ಕಟ್ಟಡ ಕುಸಿತದಲ್ಲಿ 8 ಜನರು ಮೃತಪಟ್ಟಿದ್ದು, ಮೂವರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ 17 ಮಂದಿ ಗಾಯಗೊಂಡಿದ್ದಾರೆ ಎಂದು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor