Canada| ಟೊರಂಟೊ ವಿವಿ ಕ್ಯಾಂಪಸ್ ಬಳಿ ಭಾರತೀಯ ವಿದ್ಯಾರ್ಥಿಯ ಹತ್ಯೆ
Update: 2025-12-26 10:15 IST
Photo: @TorontoPolice/X
ಟೊರಂಟೊ: ಕೆನಡಾದ ಟೊರಂಟೊ ವಿಶ್ವವಿದ್ಯಾಲಯದ ಸ್ಕಾರ್ಬರೋ ಕ್ಯಾಂಪಸ್ ಬಳಿ ಭಾರತೀಯ ವಿದ್ಯಾರ್ಥಿಯೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಭಾರತೀಯ ಮೂಲದ ಸಂಶೋಧನಾ ವಿದ್ಯಾರ್ಥಿ ಶಿವಾಂಕ್ ಅವಸ್ಥಿ(20) ಹತ್ಯೆಯಾದವರು. ಘಟನೆಯನ್ನು ಟೊರಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ದೃಢಪಡಿಸಿದ್ದಾರೆ.
"ಟೊರಂಟೊ ವಿಶ್ವವಿದ್ಯಾಲಯದ ಸ್ಕಾರ್ಬರೋ ಕ್ಯಾಂಪಸ್ ಬಳಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸಂಶೋಧನಾ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಅವರ ನಿಧನದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸುತ್ತೇವೆ. ಈ ನೋವಿನ ಸಮಯದಲ್ಲಿ ದುಃಖಿತ ಕುಟುಂಬದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಸ್ಥಳೀಯ ಅಧಿಕಾರಿಗಳ ಸಮನ್ವಯದೊಂದಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದೇವೆ" ಎಂದು ಟೊರಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಎಕ್ಸ್‌ನಲ್ಲಿ ತಿಳಿಸಿದೆ.