×
Ad

ಚೀನಾ | ಚೂರಿ ಇರಿತ, 8 ಮಂದಿ ಮೃತ್ಯು

Update: 2024-05-24 21:24 IST

ಬೀಜಿಂಗ್ : ಚೀನಾದ ಹುಬೈ ಪ್ರಾಂತದ ಕ್ಸಿಯೊಗನ್ ನಗರದಲ್ಲಿ ನಡೆದ ಚೂರಿ ಇರಿತ ಪ್ರಕರಣದಲ್ಲಿ 8 ಮಂದಿ ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಸಿಟಿವಿ ಸುದ್ಧಿವಾಹಿನಿ ವರದಿ ಮಾಡಿದೆ.

ಚೂರಿ ದಾಳಿಯಿಂದ ಗಾಯಗೊಂಡಿರುವ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 53 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು ಈತ ಈ ಹಿಂದೆ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ವರದಿ ಹೇಳಿದೆ. ಸೋಮವಾರ ಜಿಯಾಂಗ್‍ಕ್ಸಿ ಪ್ರಾಂತದಲ್ಲಿ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದ ಘಟನೆಯಲ್ಲಿ ಮಹಿಳೆಯೊಬ್ಬಳು ಚೂರಿಯಿಂದ ದಾಳಿ ನಡೆಸಿ ಇಬ್ಬರನ್ನು ಹತ್ಯೆ ಮಾಡಿದ್ದು ಇತರ 4 ಮಂದಿ ಗಾಯಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News