×
Ad

ಚೀನಾ: ಹೋಟೆಲ್‍ನಲ್ಲಿ ಅಗ್ನಿ ಅವಘಡ; 22 ಮಂದಿ ಸಾವು, 3 ಮಂದಿಗೆ ಗಾಯ

Update: 2025-04-29 23:04 IST

ಸಾಂದರ್ಭಿಕ ಚಿತ್ರ | PC : freepik.com

ಬೀಜಿಂಗ್: ಈಶಾನ್ಯ ಚೀನಾದ ಲಿಯಾನಿಂಗ್ ಪ್ರಾಂತದಲ್ಲಿ ಹೋಟೆಲ್ ಒಂದರಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 22 ಮಂದಿ ಸಾವನ್ನಪ್ಪಿದ್ದು ಕನಿಷ್ಠ ಮೂವರು ಗಾಯಗೊಂಡಿರುವುದಾಗಿ ಸರ್ಕಾರಿ ಸ್ವಾಮ್ಯದ ಕ್ಸಿನ್‍ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಲಿಯಾನಿಂಗ್ ಪ್ರಾಂತದ ಲಿಯೊಯೊಂಗ್ ನಗರದಲ್ಲಿರುವ ಹೋಟೆಲ್‍ನಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ಆವರಿಸಿದೆ. 22 ಅಗ್ನಿಶಾಮಕ ಯಂತ್ರಗಳು, 85 ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು ಕಟ್ಟಡದಲ್ಲಿದ್ದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಬೆಂಕಿ ದುರಂತದ ಕಾರಣ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News