×
Ad

ಅಮೆರಿಕದ ಚುನಾವಣೆಯ ಮೇಲೆ ಪ್ರಭಾವ ಬೀರಲು ಚೀನಾ ಪ್ರಯತ್ನ: ಬ್ಲಿಂಕೆನ್

Update: 2024-04-27 21:26 IST

Photo : X/@ABlinken

ವಾಷಿಂಗ್ಟನ್: ಅಮೆರಿಕದಲ್ಲಿ ಈ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸಲು ಮತ್ತು ಪ್ರಭಾವ ಬೀರಲು ಚೀನಾ ಪ್ರಯತ್ನಿಸಿರುವುದಕ್ಕೆ ಪುರಾವೆಗಳಿವೆ ಎಂದು ಅಮೆರಿಕದ ವಿದೇಶಾಂಗ ಸಚಿವ ಆಂಟೊನಿ ಬ್ಲಿಂಕನ್ ಹೇಳಿದ್ದಾರೆ.

ಕಳೆದ ನವೆಂಬರ್ ನಲ್ಲಿ ಸ್ಯಾನ್‍ಫ್ರಾನ್ಸಿಸ್ಕೋದಲ್ಲಿ ನಡೆದ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿಜಿಂಪಿಂಗ್‍ರನ್ನು ಭೇಟಿಯಾಗಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್ 20244 ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸದಂತೆ ಸಂದೇಶ ನೀಡಿದ್ದರು. ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕ್ಸಿಜಿಂಪಿಂಗ್ ವಾಗ್ದಾನ ನೀಡಿದ್ದರು. ಆದರೆ ಚುನಾವಣೆಯ ಮೇಲೆ ಪ್ರಭಾವ ಬೀರುವ ಮತ್ತು ಮಧ್ಯಪ್ರವೇಶಿಸುವ ಪ್ರಯತ್ನಗಳ ಪುರಾವೆಗಳು ಲಭಿಸಿವೆ. ಈ ಪ್ರಯತ್ನಗಳು ಸ್ಥಗಿತಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲು ನಾವು ಬಯಸುತ್ತಿದ್ದೇವೆ. ನಮ್ಮ ಚುನಾವಣೆಯಲ್ಲಿ ಚೀನಾದ ಯಾವುದೇ ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ ಎಂದು ಬ್ಲಿಂಕೆನ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News