ಡೊನಾಲ್ಡ್ ಟ್ರಂಪ್ ,  ಕ್ಸಿ ಜಿನ್‍ಪಿಂಗ್ | Photo Credit : AP, PTI 

ಬೀಜಿಂಗ್: ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಆಹ್ವಾನದ ಮೇರೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಸೆಪ್ಟೆಂಬರ್ 23 ರಿಂದ 25 ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಕ್ಸಿನ್‍ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸೆಪ್ಟೆಂಬರ್ 24 ರಂದು ವಾಶಿಂಗ್ಟನ್‍ನಲ್ಲಿ ಟ್ರಂಪ್ ಮತ್ತು ಕ್ಸಿ ನಡುವೆ ಶೃಂಗಸಭೆ ನಡೆಯಲಿದೆ. ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವೆ ಉದ್ವಿಗ್ನತೆಯಿದ್ದರೂ, ತಾವಿಬ್ಬರೂ ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದು ಕಳೆದ ವಾರ ಟ್ರಂಪ್ ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor