×
Ad

ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಮೇಲೆ ಗುಂಡಿನ ದಾಳಿ

Update: 2025-06-08 12:11 IST

Photo | X/@Rincon001A

ಬೊಗೋಟ : ಕೊಲಂಬಿಯಾದ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಟರ್ಬೆ ಮೇಲೆ ಬೊಗೋಟಾದಲ್ಲಿ ಚುನಾವಣಾ ಪ್ರಚಾರದ ವೇಳೆ ಗುಂಡಿನ ದಾಳಿ ನಡೆಸಲಾಗಿದೆ. ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ವೀಡಿಯೊದಲ್ಲಿ ಮಿಗುಯೆಲ್ ಉರಿಬೆ (39) ಜನ ಸಮೂಹವನ್ನುದ್ದೇಶಿಸಿ ಮಾತನಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಕೊಲಂಬಿಯಾ ಪೊಲೀಸರ ಪ್ರಕಾರ, ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಅವರನ್ನು ಶನಿವಾರ ಬೊಗೋಟಾದ ಫಾಂಟಿಬಾನ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಂಡಿಕ್ಕಿ ಹತ್ಯೆಗೆ ಯತ್ನಿಸಲಾಗಿದೆ.

ವಿರೋಧ ಪಕ್ಷದ ಸೆನೆಟರ್ ಮಿಗುಯೆಲ್ ಉರಿಬೆ ಮೇಲೆ ಮೂರು ಬಾರಿ ಗುಂಡು ಹಾರಿಸಲಾಗಿದೆ. ಎರಡು ಗುಂಡುಗಳು ತಲೆಗೆ ಮತ್ತು ಒಂದು ಗುಂಡು ಮೊಣಕಾಲಿಗೆ ತಗುಲಿದೆ. ಶಂಕಿತ ಶೂಟರ್ ಹದಿಹರೆಯದವನಾಗಿದ್ದುಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News