×
Ad

ಭಾರತದೊಂದಿಗೆ ಒಟ್ಟಾಗಿ ಕೆಲಸ ಮಾಡಲು ಬದ್ಧ: ಜಸ್ಟಿನ್ ಟ್ರೂಡೊ

Update: 2024-06-16 22:15 IST

Photo: PTI

ಟೊರಂಟೊ: ಕೆಲವು ಪ್ರಮುಖ ವಿಷಯಗಳಲ್ಲಿ ಭಾರತದೊಂದಿಗೆ ಒಟ್ಟಾಗಿ ಕೆಲಸ ಮಾಡುವ ಬದ್ಧತೆಯಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಹೇಳಿದ್ದಾರೆ.

ಇಟಲಿಯಲ್ಲಿ ನಡೆದ ಜಿ7 ದೇಶಗಳ ಶೃಂಗಸಭೆಯ ನೇಪಥ್ಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಟ್ರೂಡೊ ಉತ್ತರಿಸುತ್ತಿದ್ದರು.

ಖಾಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಏಜೆಂಟರ ಸಂಪರ್ಕದ ಬಗ್ಗೆ ವಿಶ್ವಾಸಾರ್ಹ ಮಾಹಿತಿಯಿದೆ ಎಂದು ಕಳೆದ ವರ್ಷದ ಸೆಪ್ಟೆಂಬರ್ 18ರಂದು ಟ್ರೂಡೊ ಕೆನಡಾ ಸಂಸತ್ತಿನಲ್ಲಿ ಆರೋಪಿಸಿದ ಬಳಿಕ ಉಭಯ ಮುಖಂಡರ ಪ್ರಥಮ ಭೇಟಿ ಇಡಾಗಿತ್ತು. ನಿಜ್ಜಾರ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ ಟ್ರೂಡೊ `ಈ ಮಹತ್ವದ, ಸೂಕ್ಷ್ಮ ವಿಷಯದ ಕುರಿತು ಹೆಚ್ಚಿನ ವಿವರ ಒದಗಿಸಲಾಗದು. ಆದರೆ ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಬದ್ಧತೆ ಇದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News