×
Ad

ಸೈಬರ್ ದಾಳಿ : ಯುರೋಪ್‍ನ ಪ್ರಮುಖ ವಿಮಾನ ನಿಲ್ದಾಣಗಳ ಕಾರ್ಯಾಚರಣೆಗೆ ತೊಡಕು

Update: 2025-09-20 21:53 IST

ಸಾಂದರ್ಭಿಕ ಚಿತ್ರ

 

ಲಂಡನ್, ಸೆ.20: ವಿಮಾನ ನಿಲ್ದಾಣಗಳಲ್ಲಿ ಚೆಕ್-ಇನ್ ಮತ್ತು ಬೋರ್ಡಿಂಗ್ ಸೇವೆಯ ವ್ಯವಸ್ಥೆಗಳನ್ನು ಗುರಿಯಾಗಿಸಿ ನಡೆದ ಸೈಬರ್ ದಾಳಿಯಿಂದಾಗಿ ಲಂಡನ್‍ನ ಹೀಥ್ರೂ ವಿಮಾನ ನಿಲ್ದಾಣ ಸೇರಿದಂತೆ ಯುರೋಪ್‍ನ ಪ್ರಮುಖ ವಿಮಾನ ನಿಲ್ದಾಣಗಳಲ್ಲಿನ ಕಾರ್ಯಾಚರಣೆಗೆ ತೊಡಕುಂಟಾಗಿದ್ದು ಹಲವು ವಿಮಾನಗಳ ರದ್ದತಿ ಅಥವಾ ವಿಳಂಬದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ.

ಯಾಂತ್ರಿಕ ವ್ಯವಸ್ಥೆ ಕಾರ್ಯಾಚರಣೆ ಸ್ಥಗಿತಗೊಳಿಸಿದ ಕಾರಣ ಹಸ್ತಚಾಲಿತ ಚೆಕ್-ಇನ್ ಮತ್ತು ಬೋರ್ಡಿಂಗ್ ಕಾರ್ಯವಿಧಾನಗಳು ಮಾತ್ರ ಮುಂದುವರಿದಿವೆ. ಇದರಿಂದ ವಿಮಾನಗಳು ನಿಗದಿತ ಸಮಯದಲ್ಲಿ ಕಾರ್ಯಾಚರಣೆ ನಡೆಸಲು ಸಾಧ್ಯವಾಗಲಿಲ್ಲ. ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News