ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸ್ವಿಝರ್‌ಲೆಂಡ್ ಗೆ ಆಗಮಿಸಿದ ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್ | Photo Credit : AP \ PTI
ದಾವೋಸ್ (ಸ್ವಿಝರ್‌ಲೆಂಡ್): ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಿಝರ್‌ಲೆಂಡ್ ಗೆ ಆಗಮಿಸಿದ್ದಾರೆ.
ಗ್ರೀನ್‌ಲ್ಯಾಂಡ್ ಅನ್ನು ವಶಪಡಿಸಿಕೊಳ್ಳಲೇಬೇಕು ಎಂಬ ದೃಢ ನಿಶ್ಚಯದೊಂದಿಗೆ ಸ್ವಿಝರ್‌ಲೆಂಡ್ ಗೆ ಆಗಮಿಸಿರುವ ಡೊನಾಲ್ಡ್ ಟ್ರಂಪ್‌ಗೆ ದಾವೋಸ್‌ನಲ್ಲಿ ವಿರೋಧ ಎದುರಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.
ಇದಕ್ಕೆ ಪೂರಕವಾಗಿ, ಗ್ರೀನ್‌ಲ್ಯಾಂಡ್‌ಗೆ ಸಂಬಂಧಿಸಿದಂತೆ ನಾನು ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಘೋಷಿಸಿದ್ದಾರೆ.
ಈ ನಡುವೆ, ಗ್ರೀನ್‌ಲ್ಯಾಂಡ್ ಕುರಿತ ಉದ್ವಿಗ್ನತೆಯು ಉಕ್ರೇನ್ ವಿಷಯದಿಂದ ಯೂರೋಪ್ ಹಾಗೂ ಅಮೆರಿಕದ ಗಮನವನ್ನು ಬೇರೆಡೆಗೆ ಸೆಳೆಯಬಾರದು ಎಂದು ನ್ಯಾಟೊ ಮುಖ್ಯಸ್ಥರು ಎಚ್ಚರಿಸಿದ್ದಾರೆ.
ಅಗತ್ಯವಿದ್ದರೆ ಅಮೆರಿಕದ ಹಿತಾಸಕ್ತಿಯನ್ನು ಯೂರೋಪ್ ರಕ್ಷಿಸಲಿದೆ ಎಂದು ನ್ಯಾಟೊ ಮುಖ್ಯಸ್ಥರು ಡೊನಾಲ್ಡ್ ಟ್ರಂಪ್‌ಗೆ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.