×
Ad

77ನೇ ಗಣರಾಜ್ಯೋತ್ಸವ | ಭಾರತಕ್ಕೆ ಐತಿಹಾಸಿಕ ಬಾಂಧವ್ಯದ ಸಂದೇಶ ರವಾನಿಸಿದ ಡೊನಾಲ್ಡ್ ಟ್ರಂಪ್

Update: 2026-01-26 20:33 IST

ನರೇಂದ್ರ ಮೋದಿ , ಡೊನಾಲ್ಡ್ ಟ್ರಂಪ್ | Photo Credit : @USAndIndia

ಹೊಸದಿಲ್ಲಿ: ಇಂದು (ಸೋಮವಾರ) ತಮ್ಮ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಪ್ಪು–ಬಿಳುಪು ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಭಾರತಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.

“ಅಮೆರಿಕ ಜನತೆಯ ಪರವಾಗಿ, 77ನೇ ಗಣರಾಜ್ಯೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಭಾರತ ಸರ್ಕಾರ ಹಾಗೂ ಜನತೆಗೆ ನಾನು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ,” ಎಂದು ಅವರು ಹೇಳಿದ್ದಾರೆ.

“ಭಾರತ ಮತ್ತು ಅಮೆರಿಕ ಜಗತ್ತಿನ ಅತ್ಯಂತ ಪುರಾತನ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ ಐತಿಹಾಸಿಕ ಬಾಂಧವ್ಯವನ್ನು ಹಂಚಿಕೊಂಡಿವೆ,” ಎಂದೂ ಟ್ರಂಪ್ ಹೇಳಿದ್ದಾರೆ.

ದಿಲ್ಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಪಥಸಂಚಲನ ಮುಕ್ತಾಯಗೊಂಡ ಬಳಿಕ, ಮಧ್ಯಾಹ್ನ 2.14ಕ್ಕೆ ಅಮೆರಿಕದ ರಾಜತಾಂತ್ರಿಕ ಕಚೇರಿ ಡೊನಾಲ್ಡ್ ಟ್ರಂಪ್ ಅವರ ಈ ಸಂದೇಶವನ್ನು ಪೋಸ್ಟ್ ಮಾಡಿದೆ.

ಭಾರತದ ಮೇಲೆ ದುಬಾರಿ ಸುಂಕ ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ನೀತಿಯನ್ನು ಭಾರತ ಕಟುವಾಗಿ ಟೀಕಿಸಿತ್ತು. ಇದರ ಬೆನ್ನಲ್ಲೇ ಟ್ರಂಪ್ ಈ ಸಂದೇಶವನ್ನು ರವಾನಿಸಿರುವುದು ಗಮನ ಸೆಳೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News