ಅಮೆರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ
Update: 2024-11-06 17:06 IST
ಡೊನಾಲ್ಡ್ ಟ್ರಂಪ್ (PTI)
ಅಮೆರಿಕ: ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅಭೂತಪೂರ್ವ ಗೆಲುವನ್ನು ಸಾಧಿಸುವ ಮೂಲಕ ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಎರಡನೇ ಬಾರಿಗೆ ಶ್ವೇತಭವನದಲ್ಲಿ ದರ್ಬಾರ್ ನಡೆಸಲು ಡೊನಾಲ್ಡ್ ಟ್ರಂಪ್ ಗೆ ಅಗತ್ಯವಿರುವ ಕನಿಷ್ಠ 270 ಎಲೆಕ್ಟೋರಲ್ ಮತಗಳನ್ನು ಅವರು ಪಡೆದುಕೊಂಡಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ (Associated Press) ವರದಿ ಮಾಡಿದೆ. ಜಿದ್ದಾಜಿದ್ದಿನ ಪೈಪೋಟಿ ಬಳಿಕ ಡೊನಾಲ್ಡ್ ಟ್ರಂಪ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿದ್ದಾರೆ.
ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯ ಆರಂಭಿಕ ಹಂತದಿಂದಲೇ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಇದೀಗ ಅಂತಿಮ ಫಲಿತಾಂಶವು ಹೊರಬಿದ್ದಿದ್ದು ಕಮಲಾ ಹ್ಯಾರಿಸ್ ಅವರನ್ನು ಸೋಲಿಸುವ ಮೂಲಕ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.