Photo: screengrab/x.com/MarioNawfal

ಹೊಸದಿಲ್ಲಿ: ಒಮನ್‌ನ ಉತ್ತರ ಕರಾವಳಿಯಲ್ಲಿ ರವಿವಾರ ವಾಣಿಜ್ಯ ಹಡಗೊಂದರ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರು ನಾಪತ್ತೆಯಾಗಿದ್ದಾರೆ. ಹಡಗಿನಲ್ಲಿದ್ದ 11 ಮಂದಿ ಭಾರತೀಯ ಸಿಬ್ಬಂದಿಯ ಪೈಕಿ ಒಂಭತ್ತು ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಹಡಗು ಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ.

ಸೋಹರ್ ಬಂದರಿನ ಲಂಗರು ಹಾಕುವ ಪ್ರದೇಶದಲ್ಲಿ ‘ಪೆಟ್ರೋ ಡಾಲ್ಫಿನ್’ ಎಂಬ ಟ್ಯಾಂಕರ್ ಮೇಲೆ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.

‘ನಮ್ಮ ಒಂಭತ್ತು ಮಂದಿ ಭಾರತೀಯ ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಅವರು ಸುರಕ್ಷಿತವಾಗಿದ್ದಾರೆ. ಆದರೆ, ಇಬ್ಬರು ಭಾರತೀಯ ಪ್ರಜೆಗಳು ಸದ್ಯಕ್ಕೆ ನಾಪತ್ತೆಯಾಗಿದ್ದಾರೆ’ ಎಂದು ಸೋನೋವಾಲ್ ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

ನಾಪತ್ತೆಯಾದವರ ಪತ್ತೆಗಾಗಿ ಸ್ಥಳೀಯ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor