×
Ad

ಬಾಂಗ್ಲಾದೇಶದ ಮಾಜಿ ಮುಖ್ಯ ನ್ಯಾಯಾಧೀಶರ ಬಂಧನ

Update: 2025-07-25 23:13 IST

Photo | X.com;@airnews_abad

ಢಾಕಾ, ಜು.25: ಕಳೆದ ವರ್ಷ ನಡೆದಿದ್ದ ಹಸೀನಾ ವಿರೋಧಿ ಪ್ರತಿಭಟನೆ ಸಂದರ್ಭ ಸಂಭವಿಸಿದ ಕೊಲೆಗೆ ಸಂಬಂಧಿಸಿ ಬಾಂಗ್ಲಾದೇಶದ ಮಾಜಿ ಮುಖ್ಯ ನ್ಯಾಯಾಧೀಶ ಎಬಿಎಂ ಖೈರುಲ್ ಹಕ್‍ರನ್ನು ಬಾಂಗ್ಲಾದೇಶದ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಹಕ್ ಅವರ ವಿರುದ್ಧ ಇತರ ಹಲವು ಪ್ರಕರಣಗಳು ದಾಖಲಾಗಿವೆ. ಆದರೆ ಕೊಲೆಯಲ್ಲಿ ಶಾಮೀಲಾದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

2010ರಲ್ಲಿ ಬಾಂಗ್ಲಾದೇಶದ ಮುಖ್ಯ ನ್ಯಾಯಾಧೀಶರಾಗಿ 8 ತಿಂಗಳು ಕಾರ್ಯನಿರ್ವಹಿಸಿದ್ದ ಹಕ್ ಅವರನ್ನು ಬಳಿಕ ಹಸೀನಾ ಸರಕಾರ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News