×
Ad

ಭ್ರಷ್ಟಾಚಾರ ಪ್ರಕರಣ| ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿಗೆ 17 ವರ್ಷ ಜೈಲು ಶಿಕ್ಷೆ

Update: 2025-12-20 15:36 IST

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ (File Photo: PTI)

ಇಸ್ಲಮಾಬಾದ್: ತೋಷಖಾನಾದ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಪಾಕಿಸ್ತಾನದ ನ್ಯಾಯಾಲಯವೊಂದು 17 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಈ ಪ್ರಕರಣವು 2021ರಲ್ಲಿ ಸೌದಿ ಅರೇಬಿಯಾ ಸರಕಾರದಿಂದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿ ಸ್ವೀಕರಿಸಿದ್ದ ಸರಕಾರಿ ಉಡುಗೊರೆಗಳಿಗೆ ಸಂಬಂಧಿಸಿದ್ದಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಾರೂಖ್ ಅರ್ಜುಮಂಡ್ ಈ ಪ್ರಕರಣದ ತೀರ್ಪನ್ನು ಪ್ರಕಟಿಸಿದರು.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಪಾಕಿಸ್ತಾನದ ದಂಡ ಸಂಹಿತೆಯ ಸೆಕ್ಷನ್ 409ರ (ಕ್ರಿಮಿನಲ್ ವಿಶ್ವಾಸ ದ್ರೋಹ) ಅಡಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿ ಏಳು ವರ್ಷಗಳ ಸೆರೆವಾಸವನ್ನು ವಿಧಿಸಲಾಗಿದೆ. ಇದಲ್ಲದೆ, ಅವರಿಬ್ಬರಿಗೂ 1.64 ಕೋಟಿ ರೂ.ದಂಡ ವಿಧಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News