ಅಮೆರಿಕಾದ ಮಾಜಿ ಉಪಾಧ್ಯಕ್ಷ ಡಿಕ್ ಚೆನಿ ನಿಧನ
Update: 2025-11-04 22:52 IST
Photo: indiatoday
ವಾಷಿಂಗ್ಟನ್, ನ.4: ಅಮೆರಿಕಾದ ಇತಿಹಾಸದಲ್ಲಿ ಅತ್ಯಂತ ಪ್ರಭಾವೀ ಉಪಾಧ್ಯಕ್ಷರಲ್ಲಿ ಒಬ್ಬರಾಗಿದ್ದ ಡಿಕ್ ಚೆನಿ (84 ವರ್ಷ) ನ್ಯುಮೋನಿಯಾ ಮತ್ತು ಹೃದಯ ಕಾಯಿಲೆಗಳ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ನಿಧನರಾಗಿರುವುದಾಗಿ ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ.
ಡಿಕ್ ಚೆನಿ ಮಾಜಿ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ಅವರ ಎರಡು ಅವಧಿಯ ಅಧಿಕಾರಾವಧಿಯಲ್ಲಿ, 2001ರ ಜನವರಿಯಿಂದ 2009ರ ಜನವರಿಯವರೆಗೆ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.