×
Ad

ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿಗೆ 4 ಮಂದಿ ಸಾವು

Update: 2024-03-04 22:09 IST

ಸಾಂದರ್ಭಿಕ ಚಿತ್ರ

ನ್ಯೂಯಾರ್ಕ್ : ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಕಿಂಗ್ ನಗರದ ಮನೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 4 ಮಂದಿ ಮೃತಪಟ್ಟಿದ್ದು ಇತರ ಮೂವರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ರವಿವಾರ ಸಂಜೆ ಅಪಾರ್ಟ್‍ಮೆಂಟ್ ಒಂದರಲ್ಲಿ ಔತಣ ಕೂಟ ನಡೆಯುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ಗುರುತಿಸಲಾಗದ ವ್ಯಕ್ತಿಗಳು ಔತಣ ಕೂಟದಲ್ಲಿ ಸೇರಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಕಾರಿನಲ್ಲಿ ಪರಾರಿಯಾಗಿದ್ದಾರೆ. ಗುಂಡೇಟಿನಲ್ಲಿ ಮೂವರು ಪುರುಷರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡಿದ್ದ ಮಹಿಳೆಯ ಸಹಿತ 4 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News