×
Ad

ಪ್ರಧಾನಿ ಮೋದಿಗೆ ಫ್ರಾನ್ಸಿನ ಅತ್ಯುನ್ನತ ಗೌರವ

Update: 2023-07-14 10:26 IST

ಪ್ಯಾರಿಸ್: ಐತಿಹಾಸಿಕ ಕ್ಷಣವೊಂದರಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಗುರುವಾರ (ಸ್ಥಳೀಯ ಕಾಲಮಾನ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ ನ ಅತ್ಯುನ್ನತ ಗೌರವ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನೀಡಿ ಗೌರವಿಸಿದರು.

ಪ್ರಧಾನಿ ಮೋದಿ ಈ ಗೌರವಕ್ಕೆ ಪಾತ್ರರಾದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ.

ಇಂದು .(ಶುಕ್ರವಾರ)ನಡೆಯುವ ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮೋದಿ ಪಾಲ್ಗೊಳ್ಳಲಿದ್ದಾರೆ

ಭಾರತದ ಜನತೆಯ ಪರವಾಗಿ ಗೌರವ ಸಲ್ಲಿಸಿದ್ದಕ್ಕಾಗಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಎಲಿಸೀ ಪ್ಯಾಲೇಸ್ ನಲ್ಲಿ ನಡೆಯಿತು, ಅಲ್ಲಿ ಮ್ಯಾಕ್ರನ್ ಅವರು ಪ್ರಧಾನಿ ಮೋದಿಯವರಿಗೆ ಖಾಸಗಿ ಔತಣಕೂಟಕ್ಕೆ ಆತಿಥ್ಯ ನೀಡಿದರು.

ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗಾಚಿ ಅವರು ಮೋದಿ ಅವರಿಗೆ ನೀಡಿದ ಪ್ರಶಸ್ತಿಯ ಸಮೇತ ಫೊಟೊವನ್ನು ಟ್ವೀಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News