ಪಾಕ್ ಸುಪ್ರೀಂಕೋರ್ಟ್‍ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ : 12 ಮಂದಿಗೆ ಗಾಯ
Update: 2025-11-04 21:44 IST
ಸಾಂದರ್ಭಿಕ ಚಿತ್ರ
ಇಸ್ಲಮಾಬಾದ್, ನ.4: ಪಾಕಿಸ್ತಾನ ಸುಪ್ರೀಂಕೋರ್ಟ್‍ನ ತಳ ಅಂತಸ್ತಿನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸುಪ್ರೀಂಕೋರ್ಟ್‍ನ ತಳ ಅಂತಸ್ತಿನಲ್ಲಿರುವ ಕ್ಯಾಂಟೀನ್‍ನಲ್ಲಿ ಏರ್ ಕಂಡಿಷನರ್ ವ್ಯವಸ್ಥೆಯನ್ನು ದುರಸ್ತಿಗೊಳಿಸುತ್ತಿರುವ ಸಂದರ್ಭ ಸ್ಫೋಟ ಸಂಭವಿಸಿದ್ದು ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ. ಇಬ್ಬರು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು ಸ್ಫೋಟದ ಸದ್ದಿನಿಂದ ಗಾಭರಿಗೊಂಡ ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂದಿಗಳು ನ್ಯಾಯಾಲಯದಿಂದ ಹೊರಗೆ ಧಾವಿಸಿದರು ಎಂದು ಮೂಲಗಳನ್ನು ಉಲ್ಲೇಖಿಸಿ `ಎಕ್ಸ್‍ಪ್ರೆಸ್ ಟ್ರಿಬ್ಯೂನಲ್' ವರದಿ ಮಾಡಿದೆ.