ಗಾಝಾ: ಇಸ್ರೇಲ್ ದಾಳಿಯಲ್ಲಿ 12 ಮಂದಿ ಮೃತ್ಯು
Update: 2023-12-15 23:13 IST
Photo: PTI
ಗಾಝಾ: ಗಾಝಾ ಪಟ್ಟಿಯ ಖಾನ್ಯೂನಿಸ್ ನಗರದ ಮೇಲೆ ಇಸ್ರೇಲ್ ಶುಕ್ರವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಟ 12 ಮಂದಿ ಮೃತಪಟ್ಟಿದ್ದು ಇತರ 25 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸ್ಥಳಾಂತರಗೊಂಡವರಿಗಾಗಿ ಸ್ಥಾಪಿಸಿದ್ದ ತಾತ್ಕಾಲಿಕ ಶಿಬಿರದ ಸುತ್ತಮುತ್ತಲಿನ ಪ್ರದೇಶವನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಮೃತಪಟ್ಟವರಲ್ಲಿ ಮಕ್ಕಳು ಮತ್ತು ಮಹಿಳೆಯರೂ ಸೇರಿದ್ದಾರೆ. ಈ ಮಧ್ಯೆ, ಗಾಝಾ ಪ್ರದೇಶದಲ್ಲಿ ಇಸ್ರೇಲ್ ಪದಾತಿ ದಳ ನಡೆಸಿದ ಶೋಧ ಕಾರ್ಯಾಚರಣೆ ಸಂದರ್ಭ ಹಮಾಸ್ ವಶದಲ್ಲಿದ್ದ ಇಬ್ಬರು ಒತ್ತೆಯಾಳುಗಳ ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.